Menu

ವೈದ್ಯೆ ಆತ್ಮಹತ್ಯೆ ಪ್ರಕರಣ: ಅತ್ಯಾಚಾರಿ ಆರೋಪಿ ಪಿಎಸ್‌ಐ ಪೊಲೀಸ್‌ಗೆ ಶರಣು

ಮಹಾರಾಷ್ಟ್ರದ ಸತಾರದಲ್ಲಿ ನಡೆದಿದ್ದ ವೈದ್ಯೆಯ ಆತ್ಮಹತ್ಯೆ ಪ್ರಕರಣದ ಆರೋಪಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದ್ನೆ ಫಾಲ್ಟನ್ ಗ್ರಾಮೀಣ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಮತ್ತೊಬ್ಬ ಆರೋಪಿಯಾದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್‌ನನ್ನು ಪುಣೆಯಲ್ಲಿ ಬಂಧಿಸಲಾಗಿತ್ತು.

ವೈದ್ಯೆಗೆ ಮರಣೋತ್ತರ ಪರೀಕ್ಷೆಯ ವರದಿಗಳನ್ನು ಬದಲಾಯಿಸುವಂತೆ ರಾಜಕಾರಣಿಗಳು ಒತ್ತಡ ಹೇರುತ್ತಿದ್ದರು. ಪಿಎಸ್‌ಐ ವಿರುದ್ಧ ಹಲವು ಬಾರಿ ದೂರು ನೀಡಿದ್ದಳು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ಹೇಳಲಾಗಿದೆ. ವೈದ್ಯೆ ಆತ್ಮಹತ್ಯೆಗೂ ಮೊದಲು ಅಂಗೈನಲ್ಲಿ ಬರೆದಿದ್ದ ಡೆತ್‌ ನೋಟ್‌ ಪ್ರಕಾರ ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಪಿಎಸ್‌ಐಯನ್ನು ಸತಾರ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಸತಾರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯ ಮೃತದೇಹ ಫಾಲ್ಟನ್ ಪಟ್ಟಣದ ಹೋಟೆಲ್‌ನಲ್ಲಿ ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಂಗೈಯಲ್ಲಿ ಡೆತ್‌ನೋಟ್‌ ಬರೆದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬದ್ನೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದು, ಸಾಫ್ಟ್‌ವೇರ್ ಎಂಜಿನಿಯರ್ ಬಂಕರ್ ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದರು.

ಡೆತ್‌ನೋಟ್‌ ಆಧರಿಸಿ ಫಾಲ್ಟನ್‌ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳಿಬ್ಬರ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು. ಆರೋಪಿ ಬಂಕರ್ ವೈದ್ಯೆ ವಾಸಿಸುತ್ತಿದ್ದ ಮನೆಯ ಮಾಲೀಕನ ಮಗ. ಸಬ್ ಇನ್ಸ್‌ಪೆಕ್ಟರ್ ಬದ್ನೆ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

ವೈದ್ಯೆಗೆ ಮರಣೋತ್ತರ ಪರೀಕ್ಷೆಯ ವರದಿಗಳನ್ನು ಬದಲಾಯಿಸುವಂತೆ ರಾಜಕಾರಣಿಗಳು ಒತ್ತಡ ಹೇರುತ್ತಿದ್ದರು. ಪಿಎಸ್‌ಐ ವಿರುದ್ಧ ಹಲವು ಬಾರಿ ದೂರು ನೀಡಿದ್ದಳು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಮೃತ ವೈದ್ಯೆಯ ಸಂಬಂಧಿಕರು ಒತ್ತಾಯಿಸಿದ್ದಾರೆ.

Related Posts

Leave a Reply

Your email address will not be published. Required fields are marked *