ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕ ದೇಶ ಎಂದು ಬಣ್ಣಿಸಿದ್ದರಿಂದ ಪಾಕಿಸ್ತಾನದ ಶಹಬಾಜ್ ಸರ್ಕಾರ ನಟ ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕ ಎಂದು ಘೋಷಿಸಿದೆ. ಪಾಕ್ ಗೃಹ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದೆ.
ಸಲ್ಮಾನ್ ಖಾನ್ ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ನಡೆದ ಜಾಯ್ ಫೋರಮ್ 2025 ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕ ದೇಶ ಎಂದು ಉಲ್ಲೇಖಿಸಿದ್ದರು. ‘ಇವರು ರು ಬಲೂಚಿಸ್ತಾನದ ಜನರು, ಅಫ್ಘಾನಿಸ್ತಾನದ ಜನರು, ಪಾಕಿಸ್ತಾನದ ಜನರು… ಎಲ್ಲರೂ ಸೌದಿ ಅರೇಬಿಯಾದಲ್ಲಿ ಶ್ರಮಿಸುತ್ತಿದ್ದಾರೆ ಎಂದಿದ್ದರು. ಸಲ್ಮಾನ್ ಖಾನ್ ಅವರ ಈ ಹೇಳಿಕೆಗೆ ಪಾಕಿಸ್ತಾನ ಆಕ್ರೋಶ ವ್ಯಕ್ತಪಡಿಸಿದೆ.
ಪಾಕಿಸ್ತಾನದ ಆಂತರಿಕ ಸಚಿವಾಲಯ ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ನಾಲ್ಕನೇ ವೇಳಾಪಟ್ಟಿಯಲ್ಲಿ ಸೇರಿಸಿದೆ. ಅವರು ಪಾಕಿಸ್ತಾನ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ. ಸಲ್ಮಾನ್ ಖಾನ್ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದ್ದು, ಬಲೂಚಿಸ್ತಾನದ ಸ್ವಾತಂತ್ರ್ಯ ಹೋರಾಟಗಾರ ಮೀರ್ ಯಾರ್ ಬಲೂಚ್ ಸಂತೋಷ ವ್ಯಕ್ತಪಡಿಸಿದ್ದಾರೆ. ಬಲೂಚಿಸ್ತಾನದಲ್ಲಿ ಪಾಕಿಸ್ತಾನದ ವಿರುದ್ಧ ನಡೆಯು ತ್ತಿರುವ ದಂಗೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
ಸಮೃದ್ಧ ಖನಿಜ ಸಂಪನ್ಮೂಲಗಳಿಂದ ತುಂಬಿದ್ದರೂ ಆರ್ಥಿಕವಾಗಿ ಹಿಂದುಳಿದಿರುವ ಈ ಪ್ರದೇಶದಲ್ಲಿ ತಾರತಮ್ಯ, ಬಡತನ ತಾಂಡವವಾಡುತ್ತಿದ್ದು, ಚೀನಾ-ಪಾಕ್ ಯೋಜನೆಗಳ ವಿರುದ್ಧ ಆಕ್ರೋಶ ತೀವ್ರಗೊಂಡಿದೆ. ಇತ್ತೀಚಿನ ದಾಳಿಗಳಲ್ಲಿ ನೂರಾರು ಪಾಕ್ ಸೈನಿಕರು ಹತರಾಗಿದ್ದಾರೆ.


