Menu

30% ಮಾತ್ರ ಅನುದಾನ ಬಳಕೆ, ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧ: ಆರ್‌ ಅಶೋಕ ಟೀಕೆ

2025-26 ನೇ ಆರ್ಥಿಕ ಸಾಲಿನಲ್ಲಿ 6 ತಿಂಗಳು ಕಳೆದು ಹೋದರೂ 30% ಮಾತ್ರ ಅನುದಾನ ಬಳಕೆಯಾಗಿದ್ದು, @INCKarnataka ಸರ್ಕಾರದಲ್ಲಿ ಹೇಗೆ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧವಾಗಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು,  RSS ಜಪ, ವಿವಾದಾತ್ಮಕ ಹೇಳಿಕೆಗಳಲ್ಲೇ ಕಾಲಹರಣ ಮಾಡುತ್ತಿರುವ ಸಚಿವ @PriyankKharge ಅವರ ಇಲಾಖೆಗಳ ಪ್ರದರ್ಶನ ಅತ್ಯಂತ ಕಳಪೆಯಾಗಿದ್ದು, ಆರ್ ಡಿಪಿಆರ್ ಇಲಾಖೆಯಲ್ಲಿ ಕೇವಲ ಶೇ.11.02% ಐಟಿ-ಬಿಟಿ ಇಲಾಖೆಯಲ್ಲಿ ಕೇವಲ ಶೇ.10.86% ಅನುದಾನ ಬಳಕೆಯಾಗಿರುವುದು ಅವರ ಇತ್ತೀಚಿನ “ರೋಷವೇಶ”ಕ್ಕೆ ಕಾರಣ ಏನು, ಆದರೆ ಹಿಂದಿರುವ ದುರುದ್ದೇಶ ಎನ್ನುವುದನ್ನ ಎತ್ತಿ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ @siddaramaiah ನವರೇ, ತಮ್ಮ ಉತ್ತರಾಧಿಕಾರಿ ಯಾರು? ಅಹಿಂದ ಚಳವಳಿ ಮುನ್ನಡೆಸುವವರು ಯಾರು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕುವ ಮುನ್ನ, ಬಜೆಟ್ ನಲ್ಲಿ ಘೋಷಣೆಯಾದ ಅನುದಾನವನ್ನ ಬಿಡುಗಡೆ ಮಾಡುವುದು ಯಾವಾಗ? ಅದನ್ನ ಜನಕಲ್ಯಾಣಕ್ಕೆ, ಅಭಿವೃದ್ಧಿಗೆ ಖರ್ಚು ಮಾಡುವುದು ಯಾವಾಗ? ಎನ್ನುವ ಪ್ರಶ್ನೆಗಳನ್ನ ತಮಗೆ ತಾವೇ ಕೇಳಿಕೊಳ್ಳಿ ಸ್ವಾಮಿ ಎಂದಿದ್ದಾರೆ.

ನಿಮ್ಮಂತಹ ಅಸಮರ್ಥ ನಾಯಕರು ರಾಜ್ಯದ ಮುಖ್ಯಮಂತ್ರಿ ಆಗಿರುವುದೇ ಕನ್ನಡ ನಾಡಿನ ದೊಡ್ಡ ದುರಂತ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ. ತಮಗೆ ಇರುವ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ ಎಂದು ಕುಟುಕಿದ್ದಾರೆ.

ಮತ್ತೊಂದು ಪೋಸ್ಟ್‌ ಮಾಡಿರುವ ಆರ್‌. ಅಶೋಕ,  ಬೆಂಗಳೂರಿನ ಜಲಮೂಲ, ಅಂತರ್ಜಲ, ಕೊಳವೆಬಾವಿಗೆ ಧಕ್ಕೆಯಾಗಿದೆ,  ನಗರದ ಪರಿಸರಕ್ಕೆ ದೊಡ್ಡಮಟ್ಟದ ಪೆಟ್ಟು ಬಿದ್ದಿದೆ, ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ನಗರದ ಶ್ವಾಸಕೋಶಗಳಿಗೆ ಹಾನಿಯಾಗಿದೆ, ಟ್ರಾಫಿಕ್ ಸಮಸ್ಯೆಗೆ ಯಾವುದೇ ಶಾಶ್ವತ ಪರಿಹಾರ ಇಲ್ಲ ಎಂದು ಕಿಡಿ ಕಾರಿದ್ದಾರೆ.

 

ಸ್ವಾಮಿ ಡಿಸಿಎಂ @DKShivakumar ಅವರೇ, ಇಷ್ಟೆಲ್ಲ ಬಾಧಕಗಳಿರುವ ಸುರಂಗ ರಸ್ತೆಯನ್ನು ಮಾಡಿಯೇ ತೀರುತ್ತೇನೆ ಎನ್ನುವ ಹಠಕ್ಕೆ ಯಾಕೆ ಬಿದ್ದಿದ್ದೀರಿ?, ಐಐಎಸ್ಸಿ ಅಧ್ಯಯನ ವರದಿ, ವಿಜ್ಞಾನಿಗಳು, ಪರಿಸರ ತಜ್ಞರು, ಪರಿಸರವಾದಿಗಳು, ನಾಗರೀಕರು ಎಷ್ಟೇ ವಿರೋಧ ಮಾಡುತ್ತಿದ್ದರೂ ಸುರಂಗ ರಸ್ತೆ ಬಗ್ಗೆ ನಿಮಗೆ ಅಷ್ಟು ಅಚಲ ಆಸಕ್ತಿ ಯಾಕೆ?, ಸುರಂಗ ರಸ್ತೆಗೂ ನಿಮ್ಮ ಮುಖ್ಯಮಂತ್ರಿ ಹುದ್ದೆ ಕನಸಿಗೂ ಸಂಬಂಧವಿದೆಯಾ?, ಇದರಲ್ಲಿ @RahulGandhi ಮತ್ತು ಹೈಕಮಾಂಡ್ ಕಮಿಷನ್ ಪಾಲೆಷ್ಟು? ಉತ್ತರ ಕೊಡಿ ಸ್ವಾಮಿ. ನಿಮ್ಮ ವೈಯಕ್ತಿಕ ಪ್ರತಿಷ್ಠೆ, ಹಠಕ್ಕೆ ಬೆಂಗಳೂರಿನ ಪರಿಸರಕ್ಕೆ ದೀರ್ಘಕಾಲೀನ ಅಪಾಯ ತಂದೊಡ್ಡುವ ಅವೈಜ್ಞಾನಿಕ ಯೋಜನೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಈ ರೀತಿ ಯೋಜನೆಯನ್ನು ಹೇರಿ ಬೆಂಗಳೂರಿನ ವಿಲನ್ ಆಗಬೇಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Related Posts

Leave a Reply

Your email address will not be published. Required fields are marked *