Menu

ಉತ್ತರಾಖಂಡ್‌ನಲ್ಲಿ ನಕಲಿ ಬಾಬಾಗಳ ಬಂಧಿಸುತ್ತಿರುವ “ಕಾಲನೇಮಿ”

ಉತ್ತರಾಖಂಡ್‌ ಸರ್ಕಾರ ʼಆಪರೇಷನ್ ಕಾಲನೇಮಿʼ ಕಾರ್ಯಾಚರಣೆ ಆರಂಭಿಸಿದ್ದು, 82 ನಕಲಿ ಬಾಬಾಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಾರ್ ಧಾಮ್ ಯಾತ್ರೆ ಮತ್ತು ಕನ್ವರ್ ಯಾತ್ರೆ ಸೇರಿದಂತೆ ಧಾರ್ಮಿಕ ಕ್ಷೇತ್ರಗಳಲ್ಲಿ ನಕಲಿ ಬಾಬಾಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಉತ್ತರಾಖಂಡ ಸರ್ಕಾರ ʼಆಪರೇಷನ್ ಕಾಲನೇಮಿʼ ಕಾರ್ಯಾಚರಣೆ ಕೈಗೊಂಡಿದೆ.

ಮೂರು ದಿನಗಳಲ್ಲಿ ವಿವಿಧ ಪ್ರದೇಶಗಳಿಂದ ಒಟ್ಟು 82 ನಕಲಿ ಬಾಬಾಗಳನ್ನು ಬಂಧಿಸಲಾಗಿದೆ. ಭಾನುವಾರ ಬಂಧಿಸಿದ 34 ಜನರಲ್ಲಿ 23 ಮಂದಿ ಇತರ ರಾಜ್ಯಗಳ ನಿವಾಸಿಗಳಾಗಿದ್ದಾರೆ. ಬಂಧಿತ ನಕಲಿ ಬಾಬಾಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಗೆ ಸಂಬಂಧಿಸಿದಂತೆ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಜನರ ಭಾವನೆಗಳ ಜೊತೆ ಆಟವಾಡುವ ಇಂತಹ ವಂಚಕರನ್ನು ಸೆರೆಹಿಡಿಯಲು ತಂಡವನ್ನು ರಚಿಸಲಾಗಿದ್ದು, ನಕಲಿ ಬಾಬಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಎಸ್‌ಪಿ ಅಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.

 

Related Posts

Leave a Reply

Your email address will not be published. Required fields are marked *