Menu

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ: ಆನ್ ಲೈನ್ ನಲ್ಲಿ ಸ್ವಯಂ ನೋಂದಣಿಗೆ ಅವಕಾಶ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಆನ್ ಲೈನ್ ಮೂಲಕ ನೋಂದಣಿಗೆ ಅವಧಿ ವಿಸ್ತರಣೆ, ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 22.09.2025 ರಿಂದ ಪ್ರಾರಂಭಿಸಲಾಗಿದ್ದು ದಿನಾಂಕ:31.10.2025 ರಂದು ಮುಕ್ತಾಯಗೊಳ್ಳಲಿದೆ. ಆದರೂ ಕೂಡಾ ಆನ್ ಲೈನ್ ಮೂಲಕ ಪಾಲ್ಗೊಳ್ಳಲು ಅವಧಿ ವಿಸ್ತರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ನೀಡುವ ಹಿನ್ನೆಲೆಯಲ್ಲಿ Online ಮೂಲಕ https://kscbcselfdeclaration.karnataka.gov.in ಈ ಲಿಂಕ್ ಬಳಸಿಕೊಂಡು ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ:10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ. ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಚಿವರು ಕರೆ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *