Menu

ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

priyank kharge

ಕಲಬುರಗಿ ಜಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಪ್ರೌಢಶಾಲೆಯಲ್ಲಿ ನಡೆದ 70 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು.

ಕಲಬುರಗಿ ಜಿಲ್ಲೆಯಲ್ಲಿ ನವೋದ್ಯಮಕ್ಕೆ ಉತ್ತೇಜನ, ಪ್ರವಾಸೋದ್ಯಮ ಅಭಿವೃದ್ದಿ, ಯುವ ಸಬಲೀಕರಣ, ಶೈಕ್ಷಣಿಕ ಹಾಗೂ ಆರ್ಥಿಕ ಸಬಲತೆ ಹೊಂದುವ ಸಮಗ್ರ ಅಭಿವೃದ್ದಿಗಾಗಿ ನವ ಕಲಬುರಗಿ ನಿರ್ಮಾಣದ ನೀಲಿ‌ನಕ್ಷೆ ತಯಾರಾಗಿದ್ದು ಮುಂದಿನ ಎರಡು ವಾರದಲ್ಲಿ ಸಾರ್ವಜನಿಕರ ಮುಂದೆ ಇಡಲಿದ್ದೇವೆ ಎಂದು ಅವರು ಹೇಳಿದರು.

ಕಲಬುರಗಿ ಜಿಲ್ಲೆಯನ್ನು ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ ( Local Economy Accelerator Programme – LEAP) ಅಡಿಯಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ, ತಂತ್ರಜ್ಞಾನ, ಎಲೆಕ್ಟ್ರಾನಿಕ್, ಉದ್ಯಮಶೀಲತೆ ಕ್ಷೇತ್ರಗಳ ಅಭಿವೃದ್ದಿ ಪಡಿಸಲಾಗುವುದು ಎಂದು ತಮ್ಮ‌ ಕನಸಿನ ಯೋಜನೆಗಳಪಟ್ಟಿ ಮಾಡಿದರು.

ಕನ್ನಡಿಗರು ಕನ್ನಡವನ್ನು ಪ್ರೀತಿಸುತ್ತಾರೆ ಹಾಗೂ ಗೌರವಿಸುತ್ತಾರೆ. ಕನ್ನಡವನ್ನು ಯಾವುದೇ ಕಾರಣಕ್ಕೆ ಬಿಟ್ಟುಕೊಡುವುದಿಲ್ಲ. ಕನ್ನಡಿಗರ ಸೌಹಾರ್ದತೆ‌ಯೇ ಕರ್ನಾಟಕದ ಮಾನವ ಸಂಪನ್ಮೂಲದ ಬಗ್ಗೆ ವಿಶ್ವದಲ್ಲೇ ಹೆಚ್ಚಿನ ಗೌರವವಿದೆ ಎಂದು ಹೇಳಿದ ಸಚಿವರು, ಜರ್ಮನ್ ಮೂಲದ ಮರ್ಸಿಡೀಸ್ ಬೆಂಜ್ ಅಧ್ಯಕ್ಷರು ತಾವು ಕರ್ನಾಟಕಕ್ಕೆ ಹೋಗಿಬಂದ ಮೇಲೆ ಹೊಸ ಚೈತನ್ಯ ‌ಮೂಡುತ್ತದೆ. ಬೆಂಗಳೂರಿನ ತಮ್ಮ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿ ಕೆಲಸ ಮಾಡುವವರು ಜರ್ಮನಿಯನ್ನು ಸುಲಲಿತವಾಗಿ ಮಾತನಾಡುತ್ತಾ ಕೆಲಸ ಮಾಡುತ್ತಿದ್ದರು ಅದನ್ನು ನೋಡಿ‌ ಖುಷಿಯಾಯಿತು ಎಂದು ಅವರು ಕನ್ನಡಿಗರ ಬಗ್ಗೆ ಮಾಧ್ಯಮಗಳ ಸಂದರ್ಶನವೊಂದರಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದರು ಎಂದು ಸಚಿವರು ಘಟನೆಯನ್ನು ಮೆಲುಕು ಹಾಕಿದರು.

ಪ್ರವಾಸೋದ್ಯಮಕ್ಕೆ ಬಲ ತುಂಬುವುದು, ಕೃಷಿ ಕ್ಷೇತ್ರದಲ್ಲಿ ಸ್ಥಿರತೆ, ಕೈಗಾರಿಕೆಗಳ ಸ್ಥಾಪನೆ, ಮಾನವ ಸಂಪನ್ಮೂಲ ಅಭಿವೃದ್ದಿ, ಕೌಶಲ್ಯಾಭಿವೃದ್ದಿ, ಆರ್ಥಿಕ ಸ್ಥಿರತೆ ತರುವ ಉದ್ದೇಶದಿಂದ ಲೀಪ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವರು ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ನಂತರ ಭಾವಚಿತ್ರ ಹಾಗೂ ಸ್ಥಬ್ಧಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.

Related Posts

Leave a Reply

Your email address will not be published. Required fields are marked *