ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಮಂಜುನಾಥ್ (26) ಮೇಲೆ ಬಳ್ಳಾರಿಯ ತೋರಣಗಲ್ ಪೊಲೀಸರು ಗುರುವಾರ ಬೆಳಗ್ಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಮೂರು ದಿನದ ಹಿಂದೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ತಂಡ ರಚಿಸಿ. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ ಹೆಡ್ ಕಾನ್ಸ್ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಪಿಎಸ್ಐ ಡಾಕೇಶ್ ಆರೋಪಿಯ ಬಲಗಾಲಿಗೆ ಮೇಲೆ ಪೈರಿಂಗ್ ಮಾಡಿದ್ದರು. ಆರೋಪಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತ್ಯಾಚಾರಕ್ಕೊಳಗಾಗಿರುವ ಬಾಲಕಿ ಸದ್ಯ ಅಪಾಯದಿಂದ ಪಾರಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಆರೋಪಿ ಮಂಜುನಾಥ ಬಾಲಕಿಯನ್ನು ಹೊಂಚು ಹಾಕಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದು ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿತ್ತು. ಬಾಲಕಿಯನ್ನು ಕರೆದುಕೊಂಡು ಹೋಗುವ ಮುನ್ನ ಆರೋಪಿ ಮದ್ಯಪಾನ ಮಾಡಿದ್ದ. ಬಾಲಕಿಯ ಅತ್ಯಾಚಾರವೆಸಗಿ ಪರಾರಿಯಾಗಿದ್ದ.