ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.
ಮೈಸೂರಿನಲ್ಲಿ ಶನಿವಾರ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶದ ಮಧ್ಯದಲ್ಲೇ ಬೆಂಗಳೂರಿಗೆ ಡಿಕೆ ಶಿವಕುಮಾರ್ ಮರಳುವಾಗ ಈ ಅವಘಢ ಸಂಭವಿಸಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗ್ರಾಮದ ಟಿಎಂ ಹೂಸೂರು ಬಳಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಶನಿವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ.
ಬೆಂಗಾವಲು ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದರು.
ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸಮಾವೇಶದ ಮಧ್ಯದಲ್ಲೇ ಮಲ್ಲಿಕಾರ್ಜುನ ಖರ್ಗೆ ಭಾಷಣ ಆರಂಭಿಸುತ್ತಿದ್ದಂತೆ ಬೆಂಗಳೂರಿನಲ್ಲಿ ತುರ್ತು ಕಾರ್ಯಕ್ರಮದ ನಿಮಿತ್ತ ಡಿಕೆ ಶಿವಕುಮಾರ್ ಮರಳಿದ್ದರು.