Menu

ರಾಜ್ಯದಲ್ಲಿ ಮುಂದುವರಿದ ಮಳೆ: ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು,  ದಕ್ಷಿಣ ಕನ್ನಡದಲ್ಲಿ ಹಲವು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು,  ಜನಜೀವನ ಹೈರಾಣಾಗಿದೆ. ಮೂರು ಜಿಲ್ಲೆಗಳಿಗೆ ರೆಡ್, ನಾಲ್ಕು ಜಿಲ್ಲೆಗಳಿಗೆ ಆರೆಂಜ್, ಉಳಿದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉಡುಪಿ, ಉತ್ತರಕನ್ನಡಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಬೆಂಗಳೂರು, ರಾಮನಗರ, ಮೈಸೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಇರುವ ಸಾಧ್ಯತೆ ಇದೆ, ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಇಲಾಖೆ ನೀಡಿದೆ.

 

Related Posts

Leave a Reply

Your email address will not be published. Required fields are marked *