Tuesday, November 04, 2025
Menu

ಶಾಸಕ ಮೇಟಿ ನಿಧನ, ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮುಂದೂಡಿಕೆ: ಡಿಕೆ ಶಿವಕುಮಾರ್

“ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬುಧವಾರ ನಿಗದಿಯಾಗಿದ್ದ ‘ನೀರಿನ ಹೆಜ್ಜೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು.  “ಹೆಚ್.ವೈ. ಮೇಟಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರ ನಿಧನದ ಸುದ್ದಿ ಬಹಳ ದುಃಖ ತಂದಿದೆ. ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಮುಖ್ಯಮಂತ್ರಿಗಳು ನನಗೆ ಕರೆ ಮಾಡಿ ಬಾಗಲಕೋಟೆಗೆ ಹೋಗುವ ಬಗ್ಗೆ ಚರ್ಚೆ ಮಾಡಿದರು. ಹೀಗಾಗಿ ಮತ್ತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಮುಂದಿನ ದಿನಾಂಕ ನಿಗದಿ ಮಾಡಲಾಗುವುದು” ಎಂದು ತಿಳಿಸಿದರು.

“ಮೇಟಿ ಅವರು ನನಗೆ ಬಹಳ ಆತ್ಮೀಯರು. ಸಿದ್ದರಾಮಯ್ಯ ಅವರ ಜೊತೆಯಲ್ಲೇ ನಮ್ಮ ಪಕ್ಷಕ್ಕೆ ಸೇರಿ ಶಾಸಕರಾಗಿ ಹಾಗೂ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಈಗ ಬಿಟಿಡಿಎ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *