“ರಾಜಕೀಯ ಹೋರಾಟಗಳಿಗೆ” ಜಾರಿ ನಿರ್ದೇಶನಾಲಯವನ್ನು ಏಕೆ ಬಳಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ವಿರುದ್ಧ ಜಾರಿ ನಿರ್ದೇಶನಾಲಯದ ಮೇಲ್ಮನವಿಯನ್ನು ವಜಾಗೊಳಿಸಿದೆ. ಈ ಮೂಲಕ ಮುಡಾ ಕೇಸ್‍ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಎಂ ಪತ್ನಿ ವಿರುದ್ಧದ ಮುಡಾ ಪ್ರಕರಣದ ವಿಚಾರಣೆ ರದ್ದಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಮತ್ತು ರಾಜ್ಯ ಸಚಿವ ಬೈರತಿ ಸುರೇಶ್ ವಿರುದ್ಧದ ಸಮನ್ಸ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ವಿರುದ್ಧ ಜಾರಿ ನಿರ್ದೇಶನಾಲಯದ ಮೇಲ್ಮನವಿಯನ್ನು ಪರಿಗಣಿಸಲು ನಿರಾಕರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿ, ನಾವು ಇಡಿ ಬಗ್ಗೆ ಕೆಲವು ಕಠಿಣ ಟೀಕೆಗಳನ್ನು ಮಾಡಬೇಕಾಗಿ ಬರುತ್ತದೆ. ರಾಜಕೀಯ ಯುದ್ಧಗಳನ್ನು ಮತದಾರರ ಮುಂದೆ ನಡೆಸಲಿ. ನಿಮ್ಮನ್ನು ಏಕೆ ಎಂದು ಬಳಸಲಾಗುತ್ತಿದೆ ಎಂದು ಸಿಜೆಐ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರಿಗೆ ಹೇಳಿದರು. ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ ಇಡಿ ಕಾರ್ಯವೈಖರಿಯನ್ನು ಟೀಕಿಸಿದೆ.
ಕಳೆದ ಮಾರ್ಚ್‌ನಲ್ಲಿ ಪಾರ್ವತಿ ಮತ್ತು ಸುರೇಶ್ ವಿರುದ್ಧ ಇಡಿ ಹೊರಡಿಸಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಅದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು.