ಬೀದರ್‌ನ ಭಾಲ್ಕಿ ನೀಲಮ್ಮನಳ್ಳಿ ತಾಂಡಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಕಾರು ಮತ್ತು ಕೊರಿಯರ್ ವಾಹನ ಡಿಕ್ಕಿಯಾಗಿ ಕಾರಿನ ಚಾಲಕ ಮತ್ತು ಅದರಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
ಮೃತರು ತೆಲಂಗಾಣ ಮೂಲದವರಾಗಿದ್ದು, ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ ತೆರಳುತ್ತಿದ್ದರು. ರಾಜಪ್ಪ, ನವೀನ್, ನಾಗರಾಜ್ ಮೃತಪಟ್ಟವರೆಂದು ಗುರುತಿಸಲಾಗಿದೆ. ನಾಗರಾಜ್ ಎಂಬವರು ನಾರಾಯಣ ಖೇಡ್ ಪಿಯು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.
ಮೈಸೂರಿನಲ್ಲಿ ಅಪಘಾತ, ಬೈಕ್ ಸವಾರ ಸಾವು
ಮೈಸೂರು ಜಿಲ್ಲೆಯಲ್ಲಿ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಬಿ.ಪಿ.ಪರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಣಸೂರು – ಮೈಸೂರು ಹೆದ್ದಾರಿಯ ಜಡಗನಕೊಪ್ಪಲು ಗೇಟ್ ಬಳಿ ಅಪಘಾತ ಸಂಭವಿಸಿದೆ. ಹುಣಸೂರು ತಾಲೂಕಿನ ಗ್ರಾಮದ ನಿವಾಸಿ ಮೃತ ಪರಮೇಶ್ ವಕೀಲರು. ಜಡಗನಕೊಪ್ಪಲಿನಿಂದ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗು ಬಿಸಿನೀರಿಗೆ ಬಿದ್ದು ಸಾವು
ತಮಿಳುನಾಡಿನ ಮಧುರೈ ಜಿಲ್ಲೆಯ ಮಾಡಕುಲಂ ಪ್ರದೇಶದ ಮನೆಯಲ್ಲಿ ಏಳು ತಿಂಗಳ ಮಗುವೊಂದು ಬಿಸಿ ನೀರಿಗೆ ಬಿದ್ದು ಅಸು ನೀಗಿದೆ. ಮಗುವನ್ನು ಮಂಚದಲ್ಲಿ ಮಲಗಿಸಲಾಗಿತ್ತು. ಆ ಮಂಚದ ಬಳಿಯೇ ಸ್ನಾನಕ್ಕೆ ನೀರು ಬಿಸಿ ಮಾಡಲೆಂದು ವಾಟರ್ ಹೀಟರ್ ಇಡಲಾಗಿತ್ತು. ಆ ಮಗು ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ಮೃತಪಟ್ಟಿದೆ.
ಸೇತುಪತಿ ಮತ್ತು ವಿಜಯಲಕ್ಷ್ಮಿ ದಂಪತಿಗೆ 7 ತಿಂಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಹಾಸಿಗೆಯಲ್ಲಿ ಮಲಗಿದ್ದ ಮಗು ಕುದಿಯುವ ನೀರಿಗೆ ಬಿದ್ದಾಗ ಕಿರುಚಾಡಿದೆ. ತಕ್ಷಣ ಆ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಗುವಿನ ತಾಯಿಯ ವಿಚಾರಣೆ ನಡೆಸುತ್ತಿದ್ದಾರೆ.


