ಮುಂಬೈ: 19 ವರ್ಷಗಳ ಹಿಂದೆ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ 189 ಮಂದಿ ಮೃತಪಟ್ಟು, 800ಕ್ಕೂ ಹೆಚ್ಚು ಮಂದಿ ಗಾಯಗೊಂಡ ಪ್ರಕರಣದ ಎಲ್ಲಾ 12 ಆರೋಪಿಗಳನ್ನು ಮುಂಬೈ ಹೈಕೋರ್ಟ್ ಖುಲಾಸೆಗೊಳಿಸಿದೆ.
ರೈಲು ಸ್ಫೋಟ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯ 2015ರಲ್ಲಿ 12 ಆರೋಪಿಗಳು ಎಂದು ದೋಷಿ ಎಂದು ತೀರ್ಪು ನೀಡಿದ್ದು, 5 ಮಂದಿಗೆ ಗಲ್ಲು ಶಿಕ್ಷೆ ಹಾಗೂ ಉಳಿದವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ ಕೆಳ ಹಂತದ ನ್ಯಾಯಾಲಯ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದ ಹೈಕೋರ್ಟ್ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ನ್ಯಾಯಮೂರ್ತಿ ಅನಿಲ್ ಕಿಲೋರ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಚಂದಕ್ ನೇತೃತ್ವದ ವಿಭಾಗೀಯ ಪೀಠ, ಅಧಿಕಾರಿಗಳು ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ಒದಗಿಸಲು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿತು.
ಆರೋಪಿಗಳ ಮೇಲಿನ ಆರೋಪ ಸಾಬೀತುಪಡಿಸಲು ಸರ್ಕಾರದ ಪರ ವಕೀಲರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಆರೋಪಿಗಳು ತಪ್ಪು ಮಾಡಿದ್ದಾರೆ ಎಂದು ನಂಬಲು ಸಾಧ್ಯವೇ ಇಲ್ಲವಾಗಿದೆ. ಆರೋಪಿಗಳು ಬೇರೆ ಯಾವುದೇ ಪ್ರಕರಣದಲ್ಲಿ ಭಾಗಿಯಾಗದೇ ಇದ್ದಲ್ಲಿ ಕೂಡಲೇ ಅವರನ್ನು ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಆದೇಶಿಸಿತು.