Wednesday, November 05, 2025
Menu

ಹಳಿ ದಾಟುತ್ತಿದ್ದವರ ಮೇಲೆ ಹರಿದ ರೈಲು: 6 ಮಂದಿ ದುರ್ಮರಣ

train accident

ಮಿರ್ಜಾಪುರ: ರೈಲ್ವೆ ಹಳಿ ದಾಟುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದೆ.

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ರೈಲು ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ರೈಲು ಹಳಿ ದಾಟುವಾಗ ಏಕಾಏಕಿ ರೈಲು ಹರಿದಿದೆ. ಪ್ರಾಥಮಿಕ ವರದಿಗಳ ಪ್ರಕಾರ, 6 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಕಾರ್ತಿಕ ಪೂರ್ಣಿಮೆಯಂದು ಗಂಗಾ ಸ್ನಾನಕ್ಕೆ ಹೋಗುತ್ತಿದ್ದ ಭಕ್ತರು ಬೆಳಗ್ಗೆ 9:30ರ ಸುಮಾರಿಗೆ ರೈಲ್ವೆ ಹಳಿ ದಾಟುತ್ತಿದ್ದಾಗ ನೇತಾಜಿ ಎಕ್ಸ್‌ಪ್ರೆಸ್ (12311) ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ.

ಪ್ರಯಾಣಿಕರು ಪ್ಲಾಟ್‌ಫಾರ್ಮ್ ಬದಿಗೆ ಬದಲಾಗಿ ರೈಲಿನ ಎದುರು ಭಾಗದಲ್ಲಿ ಇಳಿದಿದ್ದಾರೆ. ಇದೇ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳಿಗೆ ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಾ ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ರೈಲು ಅಪಘಾತ

ಛತ್ತೀಸ್‌ಗಢದ  ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಜೆ ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಮೃತಪಟ್ಟಿದ್ದರು. ಈ ಘಟನೆ ಬೆನ್ನಲ್ಲೇ ಮತ್ತೊಂದು ರೈಲು ದುರಂತ ಸಂಭವಿಸಿದೆ.

ಛತ್ತೀಸ್‌ಗಢದ ಬಿಲಾಸ್‌ಪುರದ (Bilaspur Train Accident) ಲಾಲ್‌ಖಾದನ್ ಬಳಿ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಬೋಗಿಗಳು ಹಳಿತಪ್ಪಿವೆ. 2 ರೈಲು ನಿಲ್ದಾಣಗಳ ನಡುವಿನ ಅಪ್‌ಲೈನ್‌ನಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಸುಮಾರು 6 ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡರಿಂದ ಮೂವರು ಗಾಯಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *