ರೌಡಿಶೀಟರ್ ಬಂಧನಕ್ಕೆ ಹೋಗಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವ ಬೆಂಗಳೂರಿನ ತಿಲಕ್ ನಗರದಲ್ಲಿ ನಡೆದಿದೆ. ಕಲಾಸಿಪಾಳ್ಯ ರೌಡಿಶೀಟರ್ ಶಹಜದ್ ಜೊತೆ ಅನೀಷ್ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.
ತಲೆಮರೆಸಿಕೊಂಡಿದ್ದ ಶಹಜದ್‌ಗಾಗಿ ಕಲಾಸಿಪಾಳ್ಯ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಇರುವ ಬಗ್ಗೆ ಮಾಹಿತಿ ಕಲೆ
ಹಾಕಿ ಬಂಧನಕ್ಕೆ ಮುಂದಾಗಿದ್ದರು. ಆಗ ಆತ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾನೆ, ಆದರೂ ಆತ ಪರಾರಿಯಾಗಲು ಪೊಲೀಸರು ಬಿಡದಿದ್ದಾಗ ಆತ ತನ್ನ ಮೇಲೆಯೇ ಹಲ್ಲೆ ಮಾಡಿ ಕೊಂಡಿದ್ದಾನೆ.
ಪೊಲೀಸರು ಆತನನ್ನು ಬಂಧಿಸಿ ಚಿಕಿತ್ಸೆ ಕೊಡಿಸಿದ್ದು, ಗಾಯಗೊಂಡ ಪೊಲೀಸರು ಕೂಡ ಚಿಕಿತ್ಸೆ ಪಡೆದಿದ್ದಾರೆ. ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರಪನಹಳ್ಳಿ ಶಾಸಕಿ ಕಚೇರಿಯಲ್ಲಿ ದರೋಡೆ: ಇಬ್ಬರ ಬಂಧನ
ವಿಜಯನಗರಜಿಲ್ಲೆ ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಅವರ ಕಚೇರಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ₹11.65 ಲಕ್ಷ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ.
ಮಧ್ಯಪ್ರದೇಶ ಮೂಲದ ಜಿಲ್ಯ ಅಲಿಯಾಸ್ ಜೀಲು ಮತ್ತು ರಾಕೇಶ್ ಪವಾರ್ ಅಲಿಯಾಸ್ ರಾಕೇಶ್ ಎಂಬ ಕಳ್ಳರಿಬ್ಬರನ್ನು ಬಂಧಿಸಲಾಗಿದೆ. ಹರಪನಹಳ್ಳಿ ಠಾಣೆಯ ಪೊಲೀಸರು ಉತ್ತಮ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿದ್ದಾರೆ ಎಂದು ಎಸ್ಪಿ ಎಸ್. ಜಾಹ್ನವಿ ತಿಳಿಸಿದ್ದಾರೆ.
ಜು. 17ರಂದು ಬೆಳಗಿನ ಜಾವಹರಪನಹಳ್ಳಿ ಪಟ್ಟಣದ ಕಾಶಿ ಸಂಗಮೇಶ್ವರ ಬಡಾವಣೆಯ ಶಾಸಕಿ ಎಂ.ಪಿ. ಲತಾ ಅವರ ಕಚೇರಿಯ ಬಾಗಿಲಿನ ಚಿಲಕ ಮುರಿದ ಕಳ್ಳರು, ಬೀರುವಿನ ಬೀಗ ಒಡೆದು ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿ ಪರಾರಿ ಆಗಿದ್ದರು. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


