ಬಿಹಾರ ವಿಧಾನಸಭೆಯ ಮತದಾನದ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಅವರ ಕಾರಿನ ಮೇಲೆ ಸ್ಥಳೀಯರು ಚಪ್ಪಲಿ ಹಾಗೂ ಕಲ್ಲುತೂರಾಟ ನಡೆಸಿದ್ದಾರೆ.
ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಗುರುವಾರ ನಡೆಯುತ್ತಿದ್ದು, ಬಿಜೆಪಿ ಮುಖಂಡ ಹಾಗೂ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ಕಾರಿನ ಮೇಲೆ ದಾಳಿ ನಡೆದಿದೆ.
ಮೂರು ಬಾರಿಯ ಶಾಸಕರಾಗಿರುವ ವಿಜಯ್ ಕುಮಾರ್ ಸಿನ್ಹಾ ಮತದಾನದ ಪ್ರಯುಕ್ತ ಲಕ್ಕಿಸಾರಾಯ್ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಚಪ್ಪಲಿ ಹಾಗೂ ಕಲ್ಲು ತೂರಾಟ ನಡೆಸಿದ್ದರಿಂದ ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಆರ್ ಜೆಡಿ ಪ್ರಚೋದಿತ ದಾಳಿ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ಬಿಹಾರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಭೀತಿಯಿಂದ ರಾಷ್ಟ್ರೀಯ ಜನತಾದಳ ಗೂಂಡಾಗಳು ದಾಳಿಗೆ ಪ್ರಚೋದನೆ ನೀಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಇವರ ಎದೆಯ ಮೇಲೆ ಬುಲ್ಡೋಜರ್ ಹಾದು ಹೋಗಲಿದೆ ಎಂಬ ಭೀತಿ ಇದೆ ಎಂದು ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.


