Menu

Dharmasthala case- ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಹೆಚ್ಚುವರಿ 20 ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಕರ್ನಾಟಕ ರಾಜ್ಯ ಡಿಜಿಪಿ ಆದೇಶ ಹೊರಡಿಸಿದ್ದು, ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದ ತನಿಖೆಗಾಗಿ ರಚಿಸಿದ್ದ ಎಸ್‌ಐಟಿ ತಂಡಕ್ಕೆ ಹೆಚ್ಚುವರಿಯಾಗಿ 20 ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದಾರೆ. ಈ ತಂಡ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತನಿಖೆ ನಡೆಸಲಿದೆ.

ಹೆಚ್ಚುವರಿಯಾಗಿ ನೇಮಕಗೊಂಡಿರುವ ಅಧಿಕಾರಿಗಳಲ್ಲಿ, ಮಂಗಳೂರು ಡಿಸಿಆರ್‌ಇ ಎಸ್ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ, ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್‌ ಇ.ಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಕೆ.ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್‌ಪೆಕ್ಟರ್‌ ಪಿ.ಡಿ ಸವಿತ್ರು ತೇಜ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಆರ್.ಸುಹಾಸ್, ಉತ್ತರ ಕನ್ನಡ ಮುಂಡಗೋಡು ಸಬ್‌ಇನ್ಸ್‌ಪೆಕ್ಟರ್‌ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಸ್ಕಾಂ ಸಬ್‌ಇನ್ಸ್‌ಪೆಕ್ಟರ್‌ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್‌ಕಾನ್‌ಸ್ಟೇಬಲ್ ಪ್ರಕಾಶ್, ಉಡುಪಿ ಕುಂದಾಪುರನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್‌ಕಾನ್‌ಸ್ಟೇಬಲ್ ದೇವರಾಜ್ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರುವ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ, ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟರ್‌ ಜೊತೆ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ. ಮೊದಲು ಎಫ್‌ಐಆರ್ ಮತ್ತು 164 ಅಡಿ ಹೇಳಿಕೆ ಪ್ರತಿ ಪಡೆಯುವ ತನಿಖಾತಂಡ ತಂಡ ಜಡ್ಜ್ ಮುಂದೆ ಕೊಟ್ಟ ಹೇಳಿಕೆಯ ಮಾಹಿತಿ ಪಡೆಯಲಿದೆ ಹೇಳಿಕೆ ನೀಡಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಿದ್ದು, ಸಿಕ್ಕಿರುವ ಸ್ಥಿಪಂಜರದ ಡಿಎನ್‌ಎ ಮ್ಯಾಚಿಂಗ್ ಪ್ರಕ್ರಿಯೆ ನಡೆಯಲಿದೆ. ನಂತರ ಬಾಕಿ ಉಳಿದಿರುವ ಅಸ್ಥಿಪಂಜರ ಹುಡುಕಾಟ ನಡೆಸಿ ತನಿಖೆ ಬಳಿಕ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಕೆ ಮಾಡಲಿದೆ.

Related Posts

Leave a Reply

Your email address will not be published. Required fields are marked *