ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123 ಕೋಟಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವ ಪ್ರಕರಣ ಇದಾಗಿದೆ.
ಪ್ರಕರಣದ ಐದು ಆರೋಪಿಗಳಿಗೂ ಶೋಕಾಸ್ ನೋಟಿಸ್ ನೀಡಿದ್ದ ಡಿಆರ್‌ಐ ರನ್ಯಾ ರಾವ್‌ಗೆ 102 ಕೋಟಿ ರೂ. ದಂಡ ವಿಧಿಸಿದೆ. ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ತಲುಪಿದ್ದು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲು ತಯಾರಿ ನಡೆದಿದೆ. ಆಕೆಯ ಮಲ ತಂದೆ ರಾಮಚಂದ್ರರಾವ್ ಅವರ ಕಾರು ದುರ್ಬಳಕೆ, ರಾಜಕಾರಣಿಗಳ ಹೆಸರು ದುರ್ಬಳಕೆ ತನಿಖೆಯಲ್ಲಿ ಬಹಿರಂಗ ಆಗಿದೆ.
ನಟಿ ರನ್ಯಾ ರಾವ್, ತರುಣ್ ರಾಜ್ ಮತ್ತು ಪ್ರಭಾವಿ ಸ್ವಾಮೀಜಿ ಮೂವರ ಗುಂಪು ಚಿನ್ನ ಕಳ್ಳಸಾಗಣೆಯಲ್ಲಿ ಶಾಮೀಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸ್ವಾಮೀಜಿ ದುಬೈನಲ್ಲಿ ಆಫೀಸ್ ತೆರೆದು ಡಿಲೀಂಗ್ ನಡೆಸುತ್ತಿದ್ದರು. ಆಫೀಸ್ನಲ್ಲಿ ಸ್ವಾಮೀಜಿ ಕ್ರಿಫ್ಟೋ ಕರೆನ್ಸಿ, ಹಣ ವಿನಿಮಯ ವ್ಯವಹಾರ ಮಾಡುತ್ತಿದ್ದರು. ಸ್ವಾಮೀಜಿ ರಾಜಕೀಯ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿನ ಸ್ವಾಮೀಜಿ ಮನೆ ಮೇಲೆ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದಾಗ ಅಪಾರ ಪ್ರಮಾಣದ ಚಿನ್ನ ಪತ್ತೆಯಾಗಿತ್ತು. ಡಿಆರ್‌ಐ ಅಧಿಕಾರಿಗಳು ತರುಣ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಆತ ದುಬೈನಲ್ಲಿ ಹಲವು ಕಾಂಟ್ಯಾಕ್ಟ್ ಹೊಂದಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.


