Tuesday, November 11, 2025
Menu

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್: ಸಾರ್ವಜನಿಕರ ಆಕ್ರೋಶ

ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೆಕ್ಕಾಗೆ ತೆರಳುತ್ತಿದ್ದವರನ್ನ ಬೀಳ್ಕೊಡಲು ಬಂದಿದ್ದವರು ಸಾರ್ವಜನಿಕ ಸ್ಥಳದಲ್ಲಿ ನಮಾಜ್‌ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಏರ್ಪೋಟ್ ಟರ್ಮಿನಲ್ 2 ರಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿರುವುದಕ್ಕೆ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಸಾರ್ವಜನಿಕರ ಸ್ಥಳದಲ್ಲಿ ಸಾಮೂಹಿಕ ನಮಾಜ್ ಮಾಡಿದರೂ ಏರ್ಪೋಟ್ ಸಿಬ್ಬಂದಿ, ಭದ್ರತಾ ಪಡೆ ಸುಮ್ಮನೆ ನೋಡುಇತ್ತ ನಿಂತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ನಮಾಜ್‌ನ ವೀಡಿಯೊ ಹಾಕಿ ನೆಟ್ಟಿಗರು ಕಿಡಿ ಕಾರಿದದ್ದು, ಏರ್ಪೋಟ್ ಒಳ ಭಾಗದಲ್ಲಿ ಪ್ರಯಾಣಿಕರಿಗೆ ಪ್ರಾರ್ಥನಾ ಕೊಠಡಿಯಿದ್ದರೂ ಹೊರಗಡೆ ನಮಾಜ್ ಮಾಡಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದ ಒಳಗಡೆ ನಮಾಜ್ ಮಾಡಲು ಅನುಮತಿ ಇದ್ಯಾ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಪ್ರಶ್ನಿಸಿದ್ದಾರೆ.

Related Posts

Leave a Reply

Your email address will not be published. Required fields are marked *