Menu

ರಾಣಿ ಚೆನ್ನಮ್ಮದೇವಿ ಅಂಚೆ ಚೀಟಿ ಬಿಡುಗಡೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮರ್ಮು!

rani chennammadevi

ನವದೆಹಲಿ: “ಮೆಣಸಿನ ರಾಣಿ” ಎಂದೇ ಪ್ರಸಿದ್ಧಳಾದ ರಾಣಿ ಚೆನ್ನಭೈ ರಾದೇವಿ ಅವರ ಸ್ಮರಣಾರ್ಥವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಚೆ ಚೀಟಿ ಬಿಡುಗಡೆ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ಗುರುವಾರ ನಡೆದ ಸರಳ ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮದೇವಿ ಅಂಚೆ ಚೀಟಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಣಿ ಚೆನ್ನಭೈರಾದೇವಿಯ ಧೈರ್ಯ, ಸ್ಥೈರ್ಯ ಮತ್ತು ಸಾಧನೆಯನ್ನು ನಾವು ಸುವರ್ಣಾಕ್ಷರಗಳಲ್ಲಿ ಮಾತ್ರವಲ್ಲ, ವಜ್ರದ ಅಕ್ಷರಗಳಲ್ಲಿ ಕೆತ್ತಬೇಕು. ಇದೊಂದು ಅವಿಸ್ಮರಣೀಯ ಘಟನೆ. ನಿಜವೇ ಎಂದು ಮೈ ಚಿವುಟಿ ನೋಡಿಕೊಳ್ಳಬೇಕಾದ ಸಂಗತಿ.  ಏಕೆಂದರೆ ನನ್ನಂಥವರಿಗೆ ರಾಷ್ಟ್ರಪತಿ ಭವನವನ್ನು ಪ್ರವೇಶಿಸುವ ಅವಕಾಶವೇ ದೊಡ್ಡದು. ಇನ್ನು ಅವರನ್ನು ಸಮೀಪದಲ್ಲಿ ಕಾಣುವ ಭಾಗ್ಯ ಮತ್ತಷ್ಟು ಹಿರಿದಾದುದು ಎಂದರು.

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮಾತನಾಡಿ, ಚೆನ್ನಭೈರಾದೇವಿ ಕರ್ನಾಟಕದ ಹೆಮ್ಮೆ. ಆಕೆ ನಮ್ಮ ಹೆಣ್ಣು ಮಕ್ಕಳು ಮತ್ತು ಸಹೋದರಿಯರಿಗೆ ಸ್ಫೂರ್ತಿಯ ಚಿಲುಮೆ. ಐನೂರು ವರ್ಷಗಳ ಹಿಂದೆಯೇ ನಮ್ಮ ಮಹಿಳೆಯರ ಸ್ವಾವಲಂಬನೆ ಮತ್ತು ಆತ್ಮರಕ್ಷಣೆಗೆ ಬೇಕಾದ ಕಲಿಕೆಗೆ ಅವಕಾಶ ಕಲ್ಪಿಸಿ ಅವರ ಸಬಲೀಕರಣಕ್ಕೆ ಕಾರಣಳಾದ ಜಿನ ಮಹಿಳೆ ಆಕೆ. ವಾಣಿಜ್ಯ ವ್ಯವಹಾರದಲ್ಲಿ ನಮ್ಮ ನೆಲಕ್ಕೆ ನೈಪುಣ್ಯತೆ ಗಳಿಸಿಕೊಟ್ಟವಳು. ಕೌಶಲದ ಜೊತೆಗೆ ಹೃದಯವಂತಿಕೆ, ಶೌರ್ಯದ ಜೊತೆಗೆ ದಯೆ ಕರುಣೆ ಇಟ್ಟುಕೊಂಡ ಘನ ವ್ಯಕ್ತಿತ್ವ ಆಕೆಯದು ಎಂದರು.

ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗಡೆ ಮಾತನಾಡಿ, ಇತಿಹಾಸದ ಗರ್ಭದಲ್ಲಿ ಅಡಗಿಹೋದ ಚೆನ್ನಭೈರಾದೇವಿಯಂತಹ ವ್ಯಕ್ತಿತ್ವಕ್ಕೆ ನ್ಯಾಯ ಸಂದಾಯವಾಗುತ್ತಿರುವ ಈ ಸಂದರ್ಭದಲ್ಲಿ ಆಕೆಯ ಸಾಧನೆಯನ್ನು ಸ್ಮರಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *