Tuesday, November 11, 2025
Menu

ಮತ ಕಳ್ಳತನ ವಿರುದ್ಧ ರಾಜ್ಯದ 1,12,41,000 ಸಹಿ ಎಐಸಿಸಿಗೆ ಹಸ್ತಾಂತರಿಸಿದ ಡಿಕೆ ಶಿವಕುಮಾರ್‌

dk shivakumar

ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು.

ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಸಲ್ಲಿಸಿದರು. ನಂತರ ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರುಗಳು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ.  ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ ಜಿ ಸಿ ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ ಮತ್ತಿತರರು ಉಪಸ್ಥಿತರಿದ್ದರು.

ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

Related Posts

Leave a Reply

Your email address will not be published. Required fields are marked *