ಯುರೋಪಿಯನ್ ಒಕ್ಕೂಟದೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೊಡ್ಡ ವ್ಯಾಪಾರ ಒಪ್ಪಂದ ಮಾಡಿಕೊಂಡಿದ್ದು, ಒಕ್ಕೂಟದಿಂದ ಬರುವ ಆಮದುಗಳ ಮೇಲೆ 15% ಸುಂಕ ವಿಧಿಸುವುದಾಗಿ ಪ್ರಕಟಿಸಿದ್ದಾರೆ.
ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಟ್ರಂಪ್ ಹಲವು ದೇಶಗಳ ಮೇಲೆ ಸುಂಕ ಸಮರ ಸಾರಿ, ಕೆಲವು ದಿನಗಳ ಹಿಂದೆ 14 ದೇಶಗಳ ಮೇಲೆ ಸುಂಕ ವಿಧಿಸಿದ್ದರು. ಮುಂಬರುವ ಆಗಸ್ಟ್ 1ರಿಂದ ಯುರೋಪಿಯನ್ ಒಕ್ಕೂಟದ ರಫ್ತಿನ ಮೇಲೆ 30% ಸುಂಕ ವಿಧಿಸುವುದಾಗಿ ಟ್ರಂಪ್ ಘೋಷಿಸಿದ್ದು, ಈ ನಡುವೆ ಮಹತ್ವದ ಒಪ್ಪಂದ ಮಾಡಿಕೊಂಡಿದ್ದು, 30% ಸುಂಕದಿಂದ 15%ಕ್ಕೆ ಇಳಿಕೆ ಮಾಡಿದ್ದಾರೆ.
ಒಪ್ಪಂದದ ಭಾಗವಾಗಿ 27 ರಾಷ್ಟ್ರಗಳ ಯುರೋಪಿಯನ್ ಒಕ್ಕೂಟ ಅಮೆರಿಕದಿಂದ 750 ಶತಕೋಟಿ ಡಾಲರ್ ಮೌಲ್ಯದ ಇಂಧನ ಖರೀದಿಸಲಿದೆ. ಅಮೆರಿಕದಲ್ಲಿ 600 ಶತಕೋಟಿ ಡಾಲರ್ಗಿಂತಲೂ ಹೆಚ್ಚಿನ ಹೂಡಿಕೆ ಮಾಡಲಿವೆ ಎಂದು ಟ್ರಂಪ್ ತಿಳಿಸಿದ್ದಾರೆ.