ಆಪರೇಷನ್ ಮಹಾದೇವ್ ಕಾರ್ಯಾಚರಣೆಯಡಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ. ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಜಂಟಿ ಕಾರ್ಯಾಚರಣೆ ನಡೆಸಿ ಪಹಲ್ಗಾಮ್ ದಾಳಿ ನಡೆಸಿದ್ದ ಭಯೋತ್ಪಾದಕರನ್ನು ಸುತ್ತುವರಿದು ಮೂವರನ್ನು ಕೊಂದಿದೆ.
ದ್ದರು. ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಹತರಾದ ಭಯೋತ್ಪಾದಕರು ಎಂದು ಹೇಳಲಾಗುತ್ತಿದೆ. ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರಿದಿದೆ. ಪಹಲ್ಗಾಮ್ ಘಟನೆಯ ನಂತರ ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನ ಘೋಷಿಸಿತ್ತು.
ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ಎಂಬ ಪ್ರತಿದಾಳಿ ನಡೆಸಿತ್ತು. ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಿಖರವಾದ ದಾಳಿ ನಡೆಸಿತ್ತು.
ಕಾಂಗ್ರೆಸ್ನ ಹಿರಿಯ ನಾಯಕ ಪಿ ಚಿದಂಬರಂ, ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ್ದರು. ಪಹಲ್ಗಾಮ್ನಲ್ಲಿ ದಾಳಿ ನಡೆಸಿದವರು ಪಾಕಿಸ್ತಾನದವರು ಎಂದು ನೀವು ಹೇಗೆ ಹೇಳುತ್ತೀರಿ. ಅವರು ದೇಶೀಯ ಭಯೋತ್ಪಾದಕರು ಕೂಡ ಆಗಿರಬಹುದಲ್ಲವೇ, ದಾಳಿ ನಡೆಸಿರುವ ಉಗ್ರರ ಬಗ್ಗೆ ಏನಾದರೂ ಸುಳಿವಿದೆಯೇ, ಅವರು ಎಲ್ಲಿಗೆ ಹೋಗಿದ್ದಾರೆ ಎನ್ನುವುದನ್ನು ಯಾರೂ ಹೇಳುತ್ತಿಲ್ಲ ಎಂದಿದ್ದರು.