ಆನೇಕಲ್ ಪಟ್ಟಣದ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗೆ ಬರುವ ಮಹಿಳೆಯರ ಮೇಲೆ ರೇಡಿಯಾಲಜಿಸ್ಟ್ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆರೋಪದಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಕ್ಯಾನಿಂಗ್ ಸೆಂಟರ್ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ದೂರು ದಾಖಲಾಗಿದ್ದು, ಆತ ಸ್ಕ್ಯಾನಿಂಗ್ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ.
ಮಹಿಳೆಯೊಬ್ಬರು ಹೊಟ್ಟೆ ನೋವಿನ ಕಾರಣ ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್ಗೆ ಹೋಗಿದ್ದರು. ಸ್ಕ್ಯಾನಿಂಗ್ ನೆಪದಲ್ಲಿ ಜಯಕುಮಾರ್ ಮಹಿಳೆ ಖಾಸಗಿ ಅಂಗಗಳನ್ನು ಸ್ಪರ್ಶಿಸಿದ್ದು, ವಿರೋಧ ವ್ಯಕ್ತಪಡಿಸಿದಾಗ ಸಾಯಿಸುವುದಾಗಿ ಬೆದರಿಸಿ, ವಿಚಾರ ಹೊರಗೆ ಬಾಯ್ಬಿಡದಂತೆ ಧಮ್ಕಿ ಹಾಕಿದ್ದಾನೆ.
ಈ ದೃಶ್ಯವನ್ನು ಸಂತ್ರಸ್ತ ಮಹಿಳೆ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಆರೋಪಿ ಜಯಕುಮಾರ್ನನ್ನು ಈವರೆಗೆ ಬಂಧಿಸಿಲ್ಲ. ಬದಲಾಗಿ ಠಾಣೆಗೆ ಕರೆಸಿ ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ. ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್: ಆರೋಪಿ ಅರೆಸ್ಟ್
ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದ್ದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿ ಚಾಲಕನ ಬಂಧಿಸಿರುವ ಸದಾಶಿವನಗರ ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.
ಸುಕೃತ್ ಕೇಶವ ಗೌಡ ಬಂಧಿತ ಕಾರು ಚಾಲಕ. ಈತ ಬೆಂಗಳೂರಿನ ಕೊಡಿಗೇಹಳ್ಳಿ ಬಾಲಾಜಿ ಲೇಔಟ್ ನಿವಾಸಿ. ವೈಟ್ ಫೀಲ್ಡ್ ಸಮೀಪದ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ.


