Thursday, November 13, 2025
Menu

“ನೀರಿನ ಹೆಜ್ಜೆ “ಪುಸ್ತಕ ಬಿಡುಗಡೆ ನಾಳೆ

ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಸಿಎಂ ಸಿದ್ದರಾಮಯ್ಯ  14-11-2025 ರಂದು ಶುಕ್ರವಾರ ಸಂಜೆ 4.00 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.

ಸಚಿವರಾದ ಎಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಎನ್ ಎಸ್ ಬೋಸರಾಜು, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ವಿ ಕಾತರಕಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಪುಸ್ತಕವು  ರಾಜ್ಯದ ನೀರಿನ ನಿರ್ವಹಣೆ, ಅಂತರರಾಜ್ಯ ಜಲವಿವಾದಗಳು ಮತ್ತು ನದಿ ಜೋಡಣೆ ಯೋಜನೆಗಳ ಬಗ್ಗೆ ವಿವರಿಸುತ್ತದೆ. ಇದರ ಜೊತೆಗೆ, “ನೀರಿನ ಹೆಜ್ಜೆ” ಎಂಬುದು ಒಂದು ವ್ಯಕ್ತಿ ಅಥವಾ ಸಮುದಾಯವು ನೇರವಾಗಿ ಮತ್ತು ಪರೋಕ್ಷವಾಗಿ ಬಳಸುವ ಒಟ್ಟು ಸಿಹಿ ನೀರಿನ ಪ್ರಮಾಣವನ್ನು ಸೂಚಿಸುವ ಒಂದು ಪರಿಕಲ್ಪನೆಯೂ ಆಗಿದೆ.

ರಾಜ್ಯದ ಹಲವು ಜಲ ಸಂಬಂಧಿ ಯೋಜನೆಗಳು ಅನಗತ್ಯವಾಗಿ ಕಗ್ಗಂಟಾಗಿವೆ. ಅದರ ಬಗ್ಗೆ ಇಲ್ಲಿ ಬೆಳಕು ಚೆಲ್ಲಲಾಗಿದೆ. ಈ ಪುಸ್ತಕವನ್ನು ಎಲ್ಲ ಶಾಸಕರಿಗೆ, ತಜ್ಞರಿಗೆ, ಅಧಿಕಾರಿಗಳಿಗೂ ತಲುಪಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

1956, ಆ.28ರಂದು ದೇಶದ ನದಿಗಳ ಮತ್ತು ಕಣಿವೆ ವಿವಾದಗಳ ನ್ಯಾಯ ನಿರ್ಣಯಕ್ಕೆ ಜಾರಿಗೊಳಿಸಲಾದ ಅಂತಾರಾಷ್ಟ್ರೀಯ ಜಲ ಅಧಿನಿಯಮ, ಅಂತಾರಾಷ್ಟ್ರೀಯ ಜಲ ಒಪ್ಪಂದಗಳಾವುವು? ಆ ದೇಶಗಳು ಕೈಗೊಂಡ ನಿರ್ಧಾರಗಳೇನು? ಭಾರತ ತೆಗೆದುಕೊಂಡ ನಿಲುವುಗಳು ಏನು? ದೇಶದ ನದಿಗಳ ಜೋಡಣೆ ಬಿಕ್ಕಟ್ಟು, ಪರಿಹಾರ ಹಾಗೂ ಜೋಡಣೆ ಸಾಧ್ಯವೇ? ಎಂಬ ಬಗ್ಗೆ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

Related Posts

Leave a Reply

Your email address will not be published. Required fields are marked *