Thursday, November 13, 2025
Menu

ಸರ್ಕಾರ ಗೊಂದಲಗಳಲ್ಲಿ ಮುಳುಗಿದ್ದು, ರೈತರನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ: ಆರ್‌ ಅಶೋಕ ಆರೋಪ

ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್ ಎಸ್ಎಸ್ ನಿಷೇಧ, ಬುರುಡೆ ಪ್ರಕರಣ ಹೀಗೆ ಅನವಶ್ಯಕ ಗೊಂದಲಗಳಲ್ಲೇ ಮುಳುಗಿ ಕಾಲಹರಣ ಮಾಡುತ್ತಿರುವ @INCKarnataka ಸರ್ಕಾರ, ರೈತರನ್ನ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಂಆಡಿರುವ ಅವರು, ಕಾಟಾಚಾರಕ್ಕೆ ವೈಮಾನಿಕ ಸಮೀಕ್ಷೆ ಮಾಡಿ 30 ದಿನಗಳೊಳಗೆ ನೆರೆ ಪರಿಹಾರ ಕೊಡುತ್ತೇವೆ ಎಂದು ಹೇಳಿದರಲ್ಲ ಸಿಎಂ @siddaramaiah ನವರೇ, ಎಲ್ಲಿ ಹೋಯಿತು ನಿಮ್ಮ ನುಡಿಯಂತೆ ನಡೆಯುವ ಸರ್ಕಾರದ ಬದ್ಧತೆ ಎಂದು ಪ್ರಶ್ನಿಸಿದ್ದಾರೆ.

ಪಾಪ ನೀವು ತಾನೇ ಏನು ಮಾಡುತ್ತೀರಿ ಬಿಡಿ. ಅತ್ತ @RahulGandhi ಅವರು ಭೇಟಿ ಮಾಡುವುದಕ್ಕೂ ಸಮಯ ಕೊಡುತ್ತಿಲ್ಲ. ಇತ್ತ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಮೇಲೆ ಡೆಡ್ ಲೈನ್ ಕೊಟ್ಟರೂ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಇನ್ನು ನೆರೆ ಪರಿಹಾರ, ಕಬ್ಬು, ಜೋಳ ಬೆಳೆಗಾರರಿಗೆ ಹೆಚ್ಚುವರಿ ಬೆಂಬಲ ಬೆಲೆ ಕೊಡಬೇಕು ಅಂದರೆ ನಿಮ್ಮ ಮಾತು ಯಾರು ಕೇಳುತ್ತಾರೆ? Outgoing ಸಿಎಂ ಸಿದ್ದರಾಮಯ್ಯನವರ ಅಸಹಾಯಕತೆ ನೋಡಿದರೆ ನಿಜಕ್ಕೂ ಕನಿಕರ ಮೂಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮತ್ತೊಂದು ಪೋಸ್ಟ್‌ಮಾಡಿರುವ ಆರ್‌ ಅಶೋಕ, ಸ್ವಾಮಿ ಸಿಎಂ @siddaramaiah ನವರೇ, ನಿಮ್ಮ @INCKarnataka ಸರ್ಕಾರ ಬಂದಾಗಿನಿಂದ ಕಳೆದ 2.5 ವರ್ಷಗಳಲ್ಲಿ ಈಗಾಗಲೇ ಡೀಸೆಲ್ ಬೆಲೆ ₹5.5 ರೂಪಾಯಿ ಹಾಗೂ ಪೆಟ್ರೋಲ್ ಬೆಲೆ ₹3 ರೂಪಾಯಿ ಹೆಚ್ಚಳ ಮಾಡಿ ಜನರ ಮೇಲೆ ಭಾರಿ ಹೊರೆ ಹೊರಿಸಿದ್ದೀರಿ. ಈಗ ಮತ್ತೊಮ್ಮೆ ಪೆಟ್ರೋಲ್ ಬೆಲೆ ₹1 ರೂಪಾಯಿ ಹೆಚ್ಚಳ ಮಾಡಲು ಹೊರಟಿದ್ದೀರಲ್ಲ ಸ್ವಾಮಿ, ನಿಮ್ಮ @INCKarnataka ಸರ್ಕಾದ ದುರಾಡಳಿತ, ಅಸಮರ್ಥತೆ, ಭ್ರಷ್ಟಾ ಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆತ್ತಬೇಕು? ಈ ಜನವಿರೋಧಿ ಸರ್ಕಾರದಿಂದ ಕರ್ನಾಟಕದ ಜನತೆ ಬೇಸತ್ತು ಹೋಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *