Thursday, November 13, 2025
Menu

ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕಾರರು ಅರ್ಜಿ ವಜಾ

supreme court

ನವದೆಹಲಿ: ಮೇಕದಾಟು ಯೋಜನೆಗೆ ತಮಿಳುನಾಡು ರಾಜ್ಯ ಸರ್ಕಾರ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮಹತ್ವದ ಗೆಲುವು ಲಭಿಸಿದೆ.

ಕಾವೇರಿ ನದಿ ನೀರು ಪೋಲಾಗದೇ ಇರಲು ಹಾಗೂ ಬೆಂಗಳೂರು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಕರ್ನಾಟಕ ಸರ್ಕಾರ ಮುಂದಾಗಿದ್ದ ಮೇಕೆದಾಟು ಯೋಜನೆಗೆ ತಕಾರರು ವ್ಯಕ್ತಪಡಿಸಿ 7 ವರ್ಷಗಳಿಂದ ತಮಿಳುನಾಡು ಸುಪ್ರೀಂಕೋರ್ಟ್ ನಲ್ಲಿ ಹೋರಾಟ ನಡೆಸಿತ್ತು.

ಮೇಕೆದಾಟು ಯೋಜನೆ ಇದು ಯೋಜನೆಯ ಆರಂಭಿಕ ಹಂತದಲ್ಲಿದ್ದು, ಯಾವುದೇ ಕಾಮಗಾರಿ ಆರಂಭವಾಗದ ಕಾರಣ ೀ ಸಂಬಂಧ ಕರ್ನಾಟಕ ಮತ್ತು ತಮಿಳುನಾಡು ನಡುವೆ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಮೇಕೆದಾಟು ಯೋಜನೆ ಸಾಧಕ-ಬಾಧಕಗಳ ಕುರಿತು ಕೇಂದ್ರದ ಜಲ ಆಯೋಗದ ತಜ್ಞರು ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವ್ಯಾಪ್ತಿಗೆ ಬರುತ್ತದೆ. ಇವರು ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ. ಆದರೆ ಇದುವರೆಗೆ ಯಾವುದೇ ಪ್ರಕ್ರಿಯೆ ಆರಂಭಗೊಳ್ಳದ ಕಾರಣ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

Related Posts

Leave a Reply

Your email address will not be published. Required fields are marked *