ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರವಾಗಿ ಡಿಸೆಂಬರ್ 6 ರಂದು ದೆಹಲಿಯ 6 ಕಡೆ ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬ ವಿಚಾರ ಬಯಲಾಗಿದೆ.
ದೆಹಲಿ ಕೆಂಪುಕೋಟೆ ಬಳಿ ಕಾರು ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಈ ಬೆಚ್ಚಿ ಬೀಳಿಸುವ ಮಾಹಿತಿ ಲಭ್ಯವಾಗಿದೆ. ಸ್ಪೋಟಕ ವಸ್ತುಗಳು, ಬಾಂಬ್ ಮತ್ತಿತರ ಸರಕುಗಳನ್ನು ಸಾಗಿಸಲು ಮಾರುತಿ ಸುಜುಕಿ ಬ್ರೇಜಾ ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು ಫೋರ್ಡ್ ಇಕೋಸ್ಪೋರ್ಟ್ ಸೇರಿದಂತೆ ಮೂವತ್ತೆರಡು ಕಾರುಗಳನ್ನು ಸಜ್ಜುಗೊಳಿಸಲಾಗುತಿತ್ತು ಎಂದು ತಿಳಿದು ಬಂದಿದೆ.
ಡಿಸೆಂಬರ್ 6 ರಂದು ಅಯೋಧ್ಯೆಯ ಬಾಬರಿ ಮಸೀದಿಯ ಧ್ವಂಸಕ್ಕೆ ಪ್ರತೀಕಾರವಾಗಿ ದೇಶದ ಹಲವೆಡೆ ಸರಣಿ ಬಾಂಬ್ ಸ್ಪೋಟ ನಡೆಸಲು ಸೋಮವಾರ ಸಂಜೆ ಸ್ಫೋಟಗೊಂಡ ಹುಂಡೈ i20 ಕಾರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿತ್ತು ಎಂದು ತನಿಖಾಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ.
ಕೆಂಪು ಕೋಟೆ ಬಳಿ ನವೆಂಬರ್ 10 ರಂದು ನಡೆದ ಕಾರು ಬಾಂಬ್ ಸ್ಫೋಟದಲ್ಲಿ 12 ಜನ ಮೃತಪಟ್ಟಿದ್ದಾರೆ. ಕಾರನ್ನು ಸ್ಫೋಟಿಸಿರುವ ವೈದ್ಯ ಉಮರ್ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯವ. ಕಾಶ್ಮೀರ, ಹರಿಯಾಣ ಮತ್ತು ಉತ್ತರ ಪ್ರದೇಶಗಳಲ್ಲಿನ ಭಯೋತ್ಪಾದಕ ಜಾಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ.


