Thursday, November 13, 2025
Menu

ಚೀಟಿ ವ್ಯವಹಾರದಲ್ಲಿ ನಷ್ಟ: ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಆಪ್ತ ಆತ್ಮಹತ್ಯೆ

bjp leader

ಚೀಟಿ ಹಣ ಕಟ್ಟದೇ ಮೋಸ ಮಾಡಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತ  ವೀಡಿಯೋ ಮಾಡಿ ತಮ್ಮ ಟೂರ್ಸ್ ಅಂಡ್ ಟ್ರಾವೆಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್‌ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಅವರಿಗೂ ಆಪ್ತನಾಗಿದ್ದರು. ವೈಯಾಲಿಕಾವಲ್‌ನಲ್ಲಿರುವ ತಮ್ಮ ಟೂರ್ಸ್‌ ಅಂಡ್ ಟ್ರಾವೆಲ್ಸ್‌ ಕಚೇರಿಯಲ್ಲಿ ಎರಡು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಚೀಟಿ ನಡೆಸುತ್ತಿದ್ದರು. ಆದ್ರೆ 7 ಜನ ಚೀಟಿ ಹಣ ಕಟ್ಟದೇ ಮೋಸ ಮಾಡಿದ್ರು. ಇದೇ ಸಮಯದಲ್ಲಿ ಚೀಟಿ ಕಟ್ಟಿದ್ದ ಇನ್ನುಳಿದ ನಾಲ್ವರು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರಂತೆ. ಇದರಿಂದ ಮಾನಸಿಕ ಹಿಂಸೆ ಅನುಭವಿಸುತ್ತಿದ್ದ ವೆಂಕಟೇಶ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಯುವ ಮುನ್ನ ವಿಡಿಯೋ ಮಾಡಿಟ್ಟು, ಹಣಕಾಸು ನಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ. ಜೊತೆಗೆ ಜೀವನದಲ್ಲಿ ಏನಾದರೂ ಆಗಿ ಚೀಟಿ ಏಜೆಂಟ್ ಆಗಬೇಡಿ ಅಂತಲೂ ಅಲವತ್ತುಕೊಂಡಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹವನ್ನ ಬೌರಿಂಗ್‌ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಗುರುವಾರ ಮಧ್ಯಾಹ್ನ ಅಶ್ವಥ್‌ ನಾರಾಯಣ್‌ ಅವರು ದರ್ಶನ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *