ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ಆಗಸ್ಟ್ 7ರಂದು ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 21ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಗಸ್ಟ್ 22ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 25ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿರುತ್ತದೆ.
ಸೆಪ್ಟೆಂಬರ್ 9ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಜಗದೀಪ್ ಧನ್ ಕರ್ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅನಾರೋಗ್ಯದ ಕಾರಣವನ್ನು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಜಗದೀಪ್ ಧನ್ ಕರ್ ಅವರ ರಾಜೀನಾಮೆ ಹಿಂದೆ ಹೆಚ್ಚು ಆಳವಾದ ಕಾರಣಗಳಿವೆ ಎಂದು ಹೇಳಿದೆ.