ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವ ಜೊತೆಗೆ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವಜನತೆಗೆ ಕರೆ ನೀಡಿದರು.
ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ B S ವಿಶ್ವನಾಥ್ ಅವರ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದರು
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಶ್ರೀ ಬಿ.ಎಸ್.ವಿಶ್ವನಾಥ್ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಹಕಾರಿ ಮುಖಂಡರು. ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿರುವ ಬಿ.ಎಸ್.ವಿಶ್ವನಾಥ್ ಅವರ ಪ್ರತಿಮೆಯನ್ನು ಇಂದು ಅತ್ಯಂತ ಸಂತೋಷದಿಂದ ಅನಾವರಣಗೊಳಿಸಲಾಗಿದೆ ಎಂದು ಹೇಳಿದರು.
ಇಂದಿನ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದ ಮುಖ್ಯಮಂತ್ರಿ ಸಹಕಾರಿ ಧುರೀಣರಾದ ಜಿ.ಟಿ.ದೇವೇಗೌಡರು, ಸೋಮಶೇಖರ್ , ಷಡಕ್ಷರಿ , ರೇವಣ್ಣನವರು ಸೇರಿದಂತೆ ಎಲ್ಲ ಸಹಕಾರಿಗಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಅವರ ಕುಟುಂಬ ವರ್ಗದವರಿಗೆ ಶುಭಕೋರಿದರು.


