ಕೊಡಗಿನಲ್ಲಿ ಒಂದು ವಾರದಿಂದ ಗಾಳಿ ಮಳೆಯ ಆರ್ಭಟ ಜೋರಾಗಿದ್ದು ಅವಾಂತರ ಸೃಷ್ಟಿಯಾಗಿದೆ. 2018ರ ಭೂಕುಸಿತ ಬಳಿಕ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು, ಈಗ ಅಂತರ್ಜಲದ ಮಟ್ಟ ಹೆಚ್ಚಾಗಿ ತಡೆಗೋಡೆಗಳಲ್ಲಿ ಬಿರುಕು ಉಂಟಾಗುತ್ತಿದ್ದು ಕುಸಿಯುವ ಭೀತಿ ಎದುರಾಗಿದೆ.
ಮುಂಜಾಗ್ರತೆ ಕ್ರಮವಾಗಿ 6 ಕುಟುಂಬಗಳನ್ನ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ-275ರ ತಡೆಗೋಡೆಯಲ್ಲಿ ಬಿರುಕು ಮೂಡಿದೆ. ಕರ್ಣಗೇರಿ ಪ್ರದೇಶದಲ್ಲಿ 2018ರಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿತ್ತು. ಇದರಿಂದಾಗಿ ಮಡಿಕೇರಿ-ಮಂಗಳೂರು ರಸ್ತೆ ಸಂಪರ್ಕ ಕಡಿತಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೂರು ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಿತ್ತು.
2018ರಲ್ಲೂ ಬಾರಿ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಬರುವುದೇ ದುಸ್ತರವಾಗಿತ್ತು. ಈಗ ತಡೆಗೋಡೆಯಲ್ಲಿ ಬಿರುಕು ಹೆಚ್ಚಾಗುತ್ತಿದ್ದು ಮನೆಗಳಲ್ಲಿ ವಾಸ ಮಾಡಲು ಭಯವಾಗುತ್ತಿದೆ. ಹೀಗಾಗಿ ಎಲ್ಲಾ ಕುಟುಂಬಸ್ಥರು ಕಾಳಜಿ ಕೇಂದ್ರಗಳಿಗೆ ತೆರಳಲು ಮುಂದಾಗಿರುವುದಾಗಿ ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ತಡೆಗೋಡೆ ಬಿರುಕು ಬಿಟ್ಟಿರುವ ಸ್ಥಳಕ್ಕೆ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2018ರಲ್ಲಿ ಭೂಕುಸಿತ ಉಂಟಾಗಿರುವ ಸ್ಥಳದಲ್ಲೇ ತಡೆಗೋಡೆ ಬಿರುಕು ಬಿಟ್ಟಿದೆ. ಕೆಳಭಾಗದಲ್ಲಿ ವಾಸ ಮಾಡುವ ಜನರನ್ನು ಸ್ಥಳಾಂತರ ಮಾಡಲಾಗಿದೆಎಂದು ತಿಳಿಸಿದ್ದಾರೆ.