Menu

ಭೂ ಹಗರಣ ಮಲ್ಲಿಕಾರ್ಜುನ ಖರ್ಗೆ, ಅಳಿಯನ ವಿರುದ್ಧ ಖಾಸಗಿ ದೂರು

mallikarjun kharge

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಎಐಸಿಸಿ‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿದೆ.

ದೇವನಹಳ್ಳಿಯಲ್ಲಿರುವ ” ಏರೋಸ್ಪೇಸ್ ಪಾರ್ಕ್‌ನಲ್ಲಿನ ಐದು ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಸಿಎ ಸೈಟ್​ ಹೆಸರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಅಳಿಯ ಸಿದ್ದಾರ್ಥ ವಿಹಾರ ಟ್ರಸ್ಟ್​ಗೆ ಮಂಜೂರು ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಏರೋಸ್ಪೇಸ್, ರಿಸರ್ಚ್ ಇತ್ಯಾದಿಗಳಲ್ಲಿ ಅನುಭವವಿಲ್ಲದಿದ್ದರೂ ಭರ್ತಿ ಮಾಡದ ಅರ್ಜಿ ಸಲ್ಲಿಸಿ ಭೂಮಿ‌‌ ಮಂಜೂರು ಪಡೆದಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಮತ್ತು ಇವರ ಅಳಿಯನ ವಿರುದ್ಧ ವಿಜಯ ರಾಘವನ್ ಎಂಬುವರು ಖಾಸಗಿ ದೂರು ನೀಡಿದ್ದಾರೆ.

ಅಲ್ಲದೆ, 2014ರಲ್ಲಿ ಬಿಟಿಎಂ 4ನೇ ಸ್ಟೇಜ್​ನ ಎರಡನೇ ಬ್ಲಾಕ್​ನಲ್ಲಿ 2 ಎಕರೆ ಬಿಡಿಎ ವ್ಯಾಪ್ತಿಯ ಸಿಎ ನಿವೇಶನವನ್ನು ಪರಭಾರೆ ಮಾಡಿಕೊಳ್ಳಲಾಗಿದೆ. ಜೊತೆಗೆ ದಲಿತರೆಂದು ಶೇಕಡಾ 50ರಷ್ಟು ಸಬ್ಸಿಡಿ ಪಡೆದಿದ್ದಾರೆ ಎಂದು ಮತ್ತೊಂದು ದೂರು ದಾಖಲಿಸಿದ್ದಾರೆ.

ರಾಜ್ಯಪಾಲರ ಅಂಗಳಕ್ಕೆ:

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಮಿ ಹಂಚಿಕೆ ಪ್ರಕರಣ ರಾಜ್ಯಪಾಲರ ಅಂಗಳ ತಲುಪಿತ್ತು. ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರು ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದರು.

ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಅಭಿಪ್ರಾಯದಲ್ಲಿ ತಜ್ಞರು, ತರಾತುರಿಯಲ್ಲಿ ಭೂಮಿ ಹಂಚಿಕೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಅರ್ಜಿ ಸಲ್ಲಿಕೆಯಾದ ಎರಡೇ ದಿನಗಳಲ್ಲಿ ಭೂ ಹಂಚಿಕೆ ಪ್ರಕ್ರಿಯೆ ಮಾಡಿರುವುದರಿಂದ ಪ್ರಶ್ನೆ ಮೂಡಿದೆ ಎಂದಿದ್ದರು.

Related Posts

Leave a Reply

Your email address will not be published. Required fields are marked *