Menu

suicide death-ರಾತ್ರಿ ಮಲಗಿದ್ದ ಬೆಂಗಳೂರಿನ ಬಾಲಕ ಆತ್ಮಹತ್ಯೆ

ನನ್ನನ್ನು ಕ್ಷಮಿಸಿ ಎಂದು ಡೆತ್‌ ನೋಟ್‌ ಬರೆದಿಟ್ಟು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಂಧಾರ್ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಾತ್ರಿ ಊಟ ಮಾಡಿದ ಗಂಧಾರ್‌ ಸಹಜವಾಗಿಯೇ ರೂಮ್‌ನಲ್ಲಿ ಮಲಗಿದ್ದ. ಬೆಳಗ್ಗೆ ತಂದೆ ರೂಮ್‌ ಬಾಗಿಲು ತೆರೆದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಆತನ ತಂದೆ ಗಣೇಶ್ ಪ್ರಸಾದ್ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಕಳಿಸಿದ್ದು, ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮನೆ ಚೆನ್ನಾಗಿರಬೇಕೆಂದು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಮೇಲೆ ನಿಮಗೆ ಕೋಪ ಬರುವಂತೆ ನಡೆದುಕೊಂಡಿದ್ದೇನೆ. ನನ್ನಿಂದ ನೊಂದಿದ್ದೀರಾ, ನಿಮಗೆ ತೊಂದರೆ ಕೂಡ ನೀಡಿದ್ದೇನೆ, ಆದರೆ ನನ್ನ ಉದ್ದೇಶ ನಿಮ್ಮನ್ನು ನೋಯಿಸೋದಾಗಿರಲಿಲ್ಲ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ತಪ್ಪುಗಳನ್ನು ದಯವಿಟ್ಟು ಕ್ಷಮಿಸಿ. 14 ವರ್ಷ ನಾನು ಬದುಕಿದ್ದು ಅದರಲ್ಲೇ ತೃಪ್ತನಾಗಿದ್ದೇನೆ. ಖುಷಿಯ ಕ್ಷಣ ಕಳೆದಿದ್ದೇನೆ ಅದೇ ಸಾಕು. ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ. ನಾನು ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ ಎಂದು ಅವರಿಗೆ ತಿಳಿಸಿ. ನನ್ನ ಶಾಲಾ ಸ್ನೇಹಿತರಿಗೂ ಈ ಮಾತು ಹೇಳಿ. ಐ ಮಿಸ್ ಯೂ ಆಲ್- ಗುಡ್​ಬೈ ಅಮ್ಮ ಎಂದು ಡೆತ್​ನೋಟ್​ ಬರೆಯಲಾಗಿದೆ.

 

 

Related Posts

Leave a Reply

Your email address will not be published. Required fields are marked *