ರಾಜ್ಯದಲ್ಲಿ ಮತಗಳ್ಳತನ ವಿರೋಧಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.
ಜಾರ್ಖಂಡ್ ಮುಖ್ಯಮಂತ್ರಿ ಶಿಬು ಸೊರೆನ್ ನಿಧನದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಯನ್ನು ಮುಂದೂಡಲಾಗಿದೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಳ್ಳತನ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಶಿಬುಸೊರೆನ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಶಿಬು ಸೊರೆನ್ ಗೆ ಪಕ್ಷದ ವತಿಯಂದ ಶ್ರದ್ಧಾಂಜಲಿ ಅರ್ಪಿಸಲಾಗುವುದು. ಅವರು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದರು ಎಂದರು.