ನಾಳೆಯಿಂದ ಅಂದರೆ ಆಗಸ್ಟ್ ೫ರಿಂದ ರಾಜ್ಯದ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಹೇಳಿದ್ದು, ಅದನ್ನು ಒಂದು ದಿನದ ಮಟ್ಟಿಗೆ ಮುಂದೂಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರವಹಿಸಲು ಸರ್ಕಾರಕ್ಕೆ ಸೂಚನೆ ನೀಡುವಂತೆ ವಕೀಲ ಅಮೃತೇಶ್ ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ನ್ಯಾ.ಕೆ.ಎಸ್.ಮುದಗಲ್, ನ್ಯಾ.ಎಂ.ಜಿ.ಎಸ್. ಕಮಲ್ ಅವರ ಪೀಠ ಅರ್ಜಿಯ ವಿಚಾರಣೆ ನಡೆಸಿ, ಪ್ರತಿಭಟನೆ ನಡೆಸದಂತೆ ಸರ್ಕಾರ ಎಸ್ಮಾ ಜಾರಿಗೊಳಿಸಿದೆ ಎಂದು ಕೋರ್ಟ್ಗೆ ತಿಳಿಸಿದರು.
ಸರ್ಕಾರದ ಪರ ಹಾಜರಾದ ವಕೀಲರಾದ ನಿಲೋಫರ್ ಅಕ್ಬರ್, ಸಿಎಂ ಸಿದ್ದರಾಮಯ್ಯನವರು ಸಾರಿಗೆ ನೌಕರರ ಜೊತೆ ಸಭೆ ನಡೆಸುತ್ತಿದ್ದು ಪ್ರಗತಿಯಲ್ಲಿದೆ ಎಂಬ ವಿಚಾರವನ್ನು ಕೋರ್ಟ್ ಗಮನಕ್ಕೆ ತಂದರು.
ಮುಖ್ಯಮಂತ್ರಿಗಳು ಸಭೆ ನಡೆಸುತ್ತಿದ್ದಾರೆ. ಒಂದು ದಿನ ಸಾರಿಗೆ ಮುಷ್ಕರ ಮುಂದೂಡಬಹುದು ಎಂದು ಹೇಳಿ ಪೀಠ ಬುಧವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಮುಖ್ಯಮಂತ್ರಿ ಸಾರಿಗೆ ನೌಕರರರ ಜೊತೆ ನಡೆಸಿದ ಸಂಧಾನ ಸಭೆ ವಿಫಳಗೊಂಇದ್ದು, ಮುಷ್ಕರ ನಡೆಸುವುದಾಗಿ ನೌಕರರ ಸಂಘಟನೆ ತಿಳಿಸಿದೆ.