Menu

ನ.1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್​​ ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

bbmp

ಬೆಂಗಳೂರು: ಬರುವ ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್​​ ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬಿಬಿಎಂಪಿಯನ್ನು 5 ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಹೀಗಾಗಿ, ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆ ಪೂರ್ಣಗೊಳಿಸಿ ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020 ರ ಅಡಿಯಲ್ಲಿ ಕಡ್ಡಾಯವಾಗಿ 243 ವಾರ್ಡ್‌ಗಳ ಬದಲಿಗೆ 198 ವಾರ್ಡ್‌ಗಳಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ಆದೇಶ ನೀಡಿತ್ತು. ಹೈಕೋರ್ಟ್​ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ. ಸೂರ್ಯಕಾಂತ್ ಅವರ ನೇತೃತ್ವದ ದ್ವಿಸದಸ್ಯ ಪೀಠ, ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆ ಪೂರ್ಣಗೊಳಿಸಿ. ಬಳಿಕ, ವಾರ್ಡ್​ ಮತದಾರರ ಪಟ್ಟಿ ರೂಪಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿ, ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿದೆ.

ಈ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ನವೆಂಬರ್​ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಮುಗಿಯಲಿದೆ. ಅದಕ್ಕೂ ಮುನ್ನವೂ ಈ ಪ್ರಕ್ರಿಯೆ ಮುಗಿಯುವ ಸಂಭವ ಇದೆ.

ಕೋರ್ಟ್​ ಸೂಚಿಸಿದರೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಪ್ರಮಾಣ ಪತ್ರ ಸಲ್ಲಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರ ಅಫಿಡೆವಿಟ್ ಕೂಡಾ ಸಲ್ಲಿಕೆ ಮಾಡಿತ್ತು. ಚುನಾವಣಾ ಆಯೋಗ ನವೆಂಬರ್ ಬಳಿಕ ಚುನಾವಣೆ ನಡೆಸಲು ಎರಡು ತಿಂಗಳ ಸಮಯ ಕೇಳಿತ್ತು. ಈ ಹಿನ್ನೆಲೆಯಲ್ಲಿ ಜನವರಿ ಅಥವಾ ಫೆಬ್ರವರಿಯಲ್ಲಿ ಬೆಂಗಳೂರಿನ ಐದೂ ಪಾಲಿಕೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಚುನಾವಣಾ ಪ್ರಕ್ರಿಯೆ:

ನವೆಂಬರ್ 1ರೊಳಗೆ ಕ್ಷೇತ್ರ ಪುನರ್ವಿಂಗಡಣೆ ಪೂರ್ಣಗೊಳಿಸಲಾಗುವುದು. ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ಬಿಬಿಎಂಪಿ ವಾರ್ಡ್​ ಪುನರ್ ವಿಂಗಡಣೆ ಬಳಿಕ ಚುನಾವಣೆ ನಡೆಸಲು 60ರಿಂದ 90 ದಿನ ಬೇಕೆಂದು ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಪ್ರತಿವಾದಿಸಿದರು.

Related Posts

Leave a Reply

Your email address will not be published. Required fields are marked *