ಕೋಲಾರ ಗಲ್ ಪೇಟೆ ಪೋಲೀಸರ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರನ್ನು ಬಂಧಿಸಲಾಗಿದೆ. ಜುನೈದ್ ಪಾಷಾ(25), ಬಾಬಾ ಜಾನ್ (2 ) ಬಂಧಿತ ಆರೋಪಿಗಳು.
ಬೇತಮಂಗಲ ಜಿಗ್ ಜಾಗ್ ಬಳಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾರೆ. ಕಳ್ಳರ ಬೆನ್ನಟ್ಟಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಪೊಲೀಸರ ವಿಚಾರಣೆ ವೇಳೆ 26 ಬೈಕ್ ಗಳನ್ನು ಕಳ್ಳತನ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ಬಂಧಿತರಿಂದ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಗಲ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮಹಿಳೆಯಿಂದ ಪ್ರಿಯಕನ ಕೊಲೆ
ಲಿವ್ ಇನ್ ಸಂಬಂಧದಲ್ಲಿ ಇದ್ದ ಮಹಿಳೆ ಪ್ರಿಯಕರನನ್ನು ಕೊಲೆ ಮಾಡಿರುವ ಘಟನೆ ವಿಜಯಪುರ ನಗರದ ಅಮನ್ ಕಾಲೊನಿಯ ಮನೆಯೊಂದರಲ್ಲಿ ನಡೆದಿದೆ. ಸಮೀರ್ ಅಲಿಯಾಸ್ ಪಿಕೆ ಇನಾಂದಾರ್(26) ಹತ್ಯೆಯಾದವ. ಸಹೋದರ ಅಸ್ಲಮ್ ಭಾಗವಾನ್ ಸಹಾಯ ಪಡೆದು ತಯ್ಯಾಬಾ ಎಂಬಾಕೆ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆ ಮತ್ತು ಸಹೋದರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೊಲೆಯಾಗಿರುವ ಸಮೀರ್ ರೌಡಿ ಶೀಟರ್ ಆಗಿದ್ದ. ನಾಲ್ಕರು ವರ್ಷಗಳಿಂದ ಸಮೀರ್, ತಯ್ಯಾಬಾ ಜೊತೆಗೆ ಸಂಬಂಧ ಹೊಂದಿದ್ದ. ಒಂದು ವರ್ಷದ ಹಿಂದೆ ಸಮೀರ್ ಮನಸ್ತಾಪ ಮಾಡಿಕೊಂಡಿದ್ದನಂತೆ. ಈ ವಿಚಾರವಾಗಿ ಆತನ ಮೇಲೆ ಹಲ್ಲೆಯೂ ಆಗಿತ್ತಂತೆ.
ಕೆಲ ಕಾಲ ದೂರವಿದ್ದ ಇಬ್ಬರು ನಂತರ ಮತ್ತೆ ಒಂದಾಗಿದ್ದರು. ಬಳಿಕ ಸಮೀರ್ ತಯ್ಯಾಬಾಗೆ ಕಿರುಕುಳ ನೀಡುತ್ತಿದ್ದನಂತೆ. ಕಿರುಕುಳದಿಂದ ಬೇಸತ್ತು ಸಮೀರ್‌ನನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದಾಳೆ ಎನ್ನಲಾಗಿದೆ. ಕತ್ತು ಹಿಸುಕಿ ಕೊಲೆ ಮಾಡಿ ಶವದೊಂದಿಗೆ ಬೆಳಗಿನವರೆಗೂ ಇಬ್ಬರು ಕಾದು 8 ಗಂಟೆ ನಂತರ ತಯ್ಯಾಬಾ ಗೋಲಗುಂಬಜ್ ಪೊಲೀಸ್ ಠಾಣೆಗೆ ತೆರಳಿ ಸಮೀರ್‌ನನ್ನು ಕೊಲೆ ಮಾಡಿರುವ ವಿಚಾರ ತಿಳಿಸಿದ್ದಾಳೆ.


