Menu

ಉಧಂಪುರದಲ್ಲಿ ಸೇನಾ ವಾಹನ ಉರುಳಿ ಇಬ್ಬರು ಯೋಧರ ಸಾವು

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದ ಕಾಂಡ್ವಾ ಬಳಿ ಸಿಆರ್‌ಪಿಎಫ್ ವಾಹನ ಅಪಘಾತಗೊಂಡಿದ್ದು, ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ.

ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿ, ಎಲ್ಲಾ ಗಾಯಾಳು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿವೆ. ಬಂಕರ್ ವಾಹನವು ಪಲ್ಟಿಯಾದಾಗ 23 ಸಿಆರ್‌ಪಿಎಫ್ ಸಿಬ್ಬಂದಿ ಅದರಲ್ಲಿದ್ದರು ಎಂದು ಹೆಚ್ಚುವರಿ ಎಸ್‌ಪಿ ಉಧಂಪುರ ಸಂದೀಪ್ ಭಟ್ ಹೇಳಿದ್ದಾರೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಸಂತ್‌ಗಢ ಪ್ರದೇಶದಲ್ಲಿ ಸಿಆರ್‌ಪಿಎಫ್‌ ವಾಹನ ಅಪಘಾತ ಸಂಭವಿಸಿದ ಸುದ್ದಿ ಕೇಳಿ ಬೇಸರವಾಯಿತು. ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿರುವ ಉಪ ಆಯುಕ್ತೆ ಸಲೋನಿ ರೈ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ಕ್ಷಣವೇ ರಕ್ಷಣಾ ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸ್ಥಳೀಯರು ಸ್ವಯಂಪ್ರೇರಣೆಯಿಂದ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಬಂಕರ್ ವಾಹನ ಪಲ್ಟಿಯಾದಾಗ ಅದರಲ್ಲಿ 23 ಸಿಆರ್‌ಪಿಎಫ್ ಸಿಬ್ಬಂದಿ ಇದ್ದರು. ಬಸಂತ್ ಘರ್‌ನಿಂದ ಕಾರ್ಯಾಚರಣೆ ಮುಗಿಸಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.

Related Posts

Leave a Reply

Your email address will not be published. Required fields are marked *