ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ 21 ವರ್ಷದ ಅನನ್ಯಾ ಮೃತಪಟ್ಟ ವಿದ್ಯಾರ್ಥಿನಿ.
ಈಕೆ ಕಡಬದ ಸುನೀಲ್ ಎಂಬವರ ಪುತ್ರಿ. ಸ್ಕೂಟಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಪೃಥ್ವಿ ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯ ರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಬೆಳ್ತಂಗಂಡಿಯಿಂದ ಕಾಲೇಜಿಗೆ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕಾರು ಇವರ ಸ್ಕೂಟಿಗೆ ಡಿಕ್ಕಿ ಹೊಡೆದ ರಭಸಕ್ಕೆ ಅನನ್ಯಾ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ. ಅವರ ಗೆಳತಿ ಪೃಥ್ವಿ ಸ್ಥಿತಿ ಗಂಭೀರವಾಗಿದೆ. ಪೃಥ್ವಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ, ಪ್ರಣಮ್ಯ ಸ್ಟುಡಿಯೋದ ಮಾಲೀಕರ ಪುತ್ರಿ.
ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಾವಳಕಟ್ಟೆಯಿಂದ ಎನ್‌ಸಿ ರೋಡ್‌ಗೆ ಸಾಗುವ ದಾರಿಯಲ್ಲಿ ಸಿಗುವ ಅಪಾಯಕಾರಿ ತಿರುವಿನಲ್ಲಿ ಈ ಅಪಘಾತ ನಡೆದಿದೆ.


