Menu

ಆಂಧ್ರದಲ್ಲೂ ಕರ್ನಾಟಕ ಮಾದರಿ: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

ಕರ್ನಾಟಕದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರ ಉಚಿತ ಪ್ರಯಾಣ ಜಾರಿಗೊಳಿಸಿರುವಂತೆ ಆಂಧ್ರಪ್ರದೇಶದಲ್ಲಿಯೂ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೊಳಿಸಲು ಚಂದ್ರಬಾಬು ನಾಯ್ಡು ಸರ್ಕಾರ ಮುಂದಾಗಿದೆ.

2024ರ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಚಂದ್ರಬಾಬು ನಾಯ್ಡು ಸರ್ಕಾರ ಆ.15ರಿಂದ ಸ್ತ್ರೀ ಶಕ್ತಿ ಯೋಜನೆ ಆರಂಭಿಸಲಿದೆ. ಯೋಜನೆಯಡಿ ಎಲ್ಲ ಬಾಲಕಿಯರು, ಮಹಿಳೆಯರು, ಮಂಗಳಮುಖಿಯರು ಉಚಿತ ಬಸ್ ಪ್ರಯಾಣ ಮಾಡಬಹುದು. ಆಂಧ್ರದಲ್ಲಿ ವಾಸಿಸುವ ಪ್ರಮಾಣೀಕೃತ ದಾಖಲೆ ತೋರಿಸಿ ಆಂಧ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದು ರಾಜ್ಯ ಸಾರಿಗೆ, ರಸ್ತೆಗಳು ಮತ್ತು ಕಟ್ಟಡಗಳು ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಾಂತಿಲಾಲ್ ದಂಡೆ ತಿಳಿಸಿದ್ದಾರೆ. ಈ ಯೋಜನೆ ರಾಜ್ಯಾದ್ಯಂತ ಎಪಿಎಸ್‌ಆರ್‌ಟಿಸಿಯ ಸಾಮಾನ್ಯ ಬಸ್‌ಗಳಿಗೆ ಮಾತ್ರ ಅನ್ವಯವಾಗುತ್ತದೆ. ಎಸಿ ಸೇರಿ ಐಷಾರಾಮಿ ಬಸ್ಸುಗಳಿಗೆ ಅನ್ವಯ ಆಗುವುದಿಲ್ಲ ಎಂದಿದ್ದಾರೆ.

ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲಾ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದೆ. ಬಸ್ ಸಿಬ್ಬಂದಿಯು ಬಟ್ಟೆಯ ಮೇಲೆ ಹಾಕಿಕೊಳ್ಳಬಹುದಾದ ಕ್ಯಾಮೆರಾವನ್ನು ಅಳವಡಿಸಲು ಯೋಚಿಸಿದೆ. ಬಸ್ ನಿಲ್ದಾಣಗಳಲ್ಲಿ ಫ್ಯಾನ್, ಕುರ್ಚಿ, ಕುಡಿಯುವ ನೀರು ಮತ್ತು ಶೌಚಾಲಯಗಳ ಸೌಲಭ್ಯ ದೊರೆಯಲಿದೆ. ಯೋಜನೆಗೆ ವಾರ್ಷಿಕವಾಗಿ 1,942 ಕೋಟಿ ರೂ. ಹಾಗೂ ತಿಂಗಳಿಗೆ 162 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

Related Posts

Leave a Reply

Your email address will not be published. Required fields are marked *