ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧನಸಿಂಗ್ ತಾಂಡಾದಲ್ಲಿ ಆಟವಾಡಲು ಹೋಗಿ ಬಾಲಕಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಅರ್ಚನಾ ದೀಪಕ್ ರಾಠೋಡ (8) ಮೃತ ಬಾಲಕಿ.
ಸೋಮವಾರ ಸಂಜೆ ಬಾಲಕಿತಾಯಿಯೊಂದಿಗೆ ಕುರಿ ಮೇಯಿಸಲು ಹೋಗಿದ್ದಳು. ಈ ವೇಳೆ ಆಟವಾಡುತ್ತಿದ್ದ ಬಾಲಕಿ ಆಯತಪ್ಪಿ ಬಾವಿಗೆ ಬಿದ್ದಿದ್ದಾಳೆ.
ಬಾಲಕಿ ಬಾವಿಗೆ ಬಿದ್ದಿರುವ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಕೈಗೊಂಡು ಬಾಲಕಿಯ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.