ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ, ಇದು ಆತ್ಮಹತ್ಯೆ ಆಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಕೇರಳದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತಪಟ್ಟಿರುವ ವಿದ್ಯಾರ್ಥಿಗಳು. ಇವರಿಬ್ಬರೂ ಹೆಸರಘಟ್ಟ ರಸ್ತೆಯ ಸಪ್ತಗಿರಿ ಕೇಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಇಬ್ಬರು ಪಿಜಿಗೆ ಟ್ರ್ಯಾಕ್ ಮೂಲಕ ಹೋಗಲು ಮುಂದಾಗಿದ್ದಾಗ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ ಸಿಲುಕಿ ಮೃತಪಟ್ಟಿರುವುದಾಗಿ ರೈಲ್ವೆ ಪೊಲೀಸರ ಮಾಹಿತಿ ನೀಡಿದ್ದಾರೆ.
ಅಸಹಜ ಸಾವಿನ ವರದಿ ಅಡಿಯಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಯುವಕ-ಯುವತಿ ಬಗ್ಗೆ ಮಾಹಿತಿ ಕಲೆಹಾಕುವ ಕೆಲಸ ಆರಂಭಿಸಿದ್ದಾರೆ. ಮೃತದೇಹಗಳನ್ನು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಮನೆಗಳ್ಳತನ: ಇಬ್ಬರ ಬಂಧನ
ಬೆಂಗಳೂರಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು 72 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ವಿಶ್ವಪ್ರಿಯ ಲೇಔಟ್ ನಿವಾಸಿಯೊಬ್ಬರು ಬೇಗೂರು ಪೊಲೀಸ್ ಠಾಣೆಯಲ್ಲಿ ಮನೆಗಳವು ದೂರು ದಾಖಲಿಸಿದ ಬಳಿಕ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೇಗೂರು ಸರೋವರದ ಕೋಲಿಯ ಬಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದಾರೆ. ಆರೋಪಿಗಳು ಕದ್ದ ಚಿನ್ನವನ್ನು ಕೆಜಿಎಫ್ ನಲ್ಲಿರುವ ಮೂರು ಗಿರವಿ ಅಂಗಡಿಗಳಲ್ಲಿ ಒತ್ತೆ ಇಟ್ಟಿರುವುದಾಗ ತಿಳಿಸಿದ್ದಾರೆ.


