Tuesday, November 25, 2025
Menu

ರಾಜ್ಯದಲ್ಲಿ ಇನ್ನಷ್ಟು ಉದ್ಯೋಗ ಕೌಶಲ ತರಬೇತಿ ಕೇಂದ್ರ ಕಾಮಗಾರಿ ಪ್ರಾರಂಭಿಸಲು ಸಿಎಂ ಸೂಚನೆ

ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ  ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನೂತನ ಜಿಟಿಟಿಸಿ ಕೇಂದ್ರಗಳ ಸ್ಥಾಪನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಸಚಿವರಾದ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂಪರ್ವೇಜ್ ಸೇರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.‌

ಮಧುಗಿರಿ ಮತ್ತು ಇಂಡಿ ನಬಾರ್ಡ್‌ ಸಹಯೋಗದೊಂದಿಗೆ ಹಾಗೂ ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರಿನಲ್ಲಿ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ ಅನುದಾನದಡಿ ನೂತನ ಜಿಟಿಟಿಸಿ ಗಳನ್ನು ಸ್ಥಾಪಿಸುವ ಸಂಬಂಧ  ನಡೆದ ಸಮಾಲೋಚನೆಯ ಮುಖ್ಯಾಂಶಗಳು ಹೀಗಿವೆ, 

• ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ.

• ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಸೂಚನೆ ನೀಡಿದರು.

• ಜಿಟಿಟಿಸಿ ಪ್ರವೇಶಾತಿಯನ್ನು 6 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇಲ್ಲಿಂದ ತರಬೇತಿ ಪಡೆದು ಹೊರಬರುವ ವಿದ್ಯಾರ್ಥಿಗಳಿಗೆ ವಿದೇಶಿ ಕಂಪನಿಗಳಲ್ಲಿಯೂ ಸೇರಿದಂತೆ ಶೇಕಡ 100 ರಷ್ಟು ನೇಮಕಾತಿ ಆಗುತ್ತಿದೆ .

• ಯಾವ ಕೋರ್ಸ್‌ಗಳಿಗೆ ಬೇಡಿಕೆ ಇದೆ ಅಂತಹ ಕೋರ್ಸ್‌ಗಳನ್ನು ಪ್ರಾರಂಭಿಸಲು ಸೂಚನೆ. ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿ • ಕಾರ್ಮಿಕ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಜಿಟಿಟಿಸಿ ಉತ್ಪಾದನಾ ಕೇಂದ್ರದಲ್ಲಿ ಇಸ್ರೋದ ಚಂದ್ರಯಾನ ನೌಕೆ ಲೂನಾರ್ ರೋವರ್ ಚಕ್ರದ ಉತ್ಪಾದನೆ ಸೇರಿದಂತೆ ಹಲವು ವೈಮಾನಿಕ ಉಪಕರಣಗಳ ಉತ್ಪಾದನೆ ಮಾಡಲಾಗುತ್ತಿದೆ.
• ಜಪಾನ್, ಜರ್ಮನಿ, ಆಸ್ಟ್ರೇಲಿಯಾ ಸೇರಿದಂತೆ ಹಲವು ರಾಷ್ಟ್ರಗಳೊಂದಿಗೆ ಜಿಟಿಟಿಸಿ ಒಡಂಬಡಿಕೆ ಮಾಡಿಕೊಳ್ಳಲಿದೆ.

Related Posts

Leave a Reply

Your email address will not be published. Required fields are marked *