ಬೆಂಗಳೂರಿನ ಆಡುಗೋಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಬಾಲಕ ಮೃತಪಟ್ಟಿದ್ದು, ಘಟನೆಯಲ್ಲಿ 8 ಜನ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭಿರವಾಗಿದೆ ಎಂದು ಹೇಳಲಾಗಿದೆ.
ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮನೆ ಸಂಪೂರ್ಣ ಛಿದ್ರವಾಗಿದೆ. ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಮತ್ತು ಇತರ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸಿಲಿಂಡರ್ ಲೀಕ್ ಆಗಿ ಕೆಮಿಕಲ್ ರಿಯಾಕ್ಷನ್ ಆಗಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಡುಗೊಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.