ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ನಿಮಿತ್ತ ನಾಳೆಯಿಂದ ಡಿ. 7 ರ ವರೆಗೆ ಕಬ್ಬನ್ ಪಾರ್ಕ್‌ನಲ್ಲಿ 11 ದಿನ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ಇರಲಿದೆ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. 40 ಲಕ್ಷ ರೂ ವೆಚ್ಚದಲ್ಲಿ ಕಬ್ಬನ್ ಪಾರ್ಕ್ ವತಿಯಿಂದ ಈ ಫ್ಲವರ್ ಶೋ ಆಯೋಜಿಸಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ನರ್ಸರಿ ಮತ್ತು ಆಹಾರ ಸೇರಿದಂತೆ ನೂರಾರು ಮಳಿಗೆಗಳಿರುತ್ತವೆ. ಪುಷ್ಪಗಳಲ್ಲಿ ಪ್ರಾಣಿಗಳ ಆಕೃತಿ ರಚಿಸಿ ಮಕ್ಕಳನ್ನು ಆಕರ್ಷಿಸಲಾಗುತ್ತದೆ. 20 ಸಾವಿರದಿಂದ 25 ಸಾವಿರ ಕುಂಡಗಳನ್ನು ಉದ್ಯಾನವನದಲ್ಲಿ ಬ್ಯಾಂಡ್ ಸ್ಟ್ಯಾಂಡ್ ಹತ್ತಿರ ಇಡಲು ಪ್ಲಾನ್ ಮಾಡಲಾಗಿದೆ.
ಕಬ್ಬನ್ ಪಾರ್ಕ್‌ನಲ್ಲಿ ಫ್ಲವರ್ ಶೋ ನಡೆಯಲಿರುವ ಹಿನ್ನೆಲೆಯಲ್ಲಿ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ ಎಂದು ಕಬ್ಬನ್ ಪಾರ್ಕ್ ನಿರ್ದೇಶಕಿ ಕುಸುಮಾ ಹೇಳಿದ್ದಾರೆ. 11 ದಿನ ಕೋರ್ಟ್ ವಿಠಲ್ ಮಲ್ಯ ರಸ್ತೆ ಸಂಪರ್ಕಿಸುವ ರಸ್ತೆ, ಬ್ಯಾಂಡ್ ಸ್ಟ್ಯಾಂಡ್ ಬಾಲಭವನ ಮುಂಭಾಗದ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


