ಬೆಂಗಳೂರು, ಆಗಸ್ಟ್ 16: ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಇಂದು ಅಂಜನಾಪುರದಲ್ಲಿ
ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ಬೆಂಗಳೂರು (ದಕ್ಷಿಣ) ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಛೇರಿಯನ್ನು ಉದ್ಘಾಟಿಸಿದರು.
ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಸುಲಭ, ವೇಗವಾದ ಹಾಗೂ ಪಾರದರ್ಶಕ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ನೂತನ ಕಟ್ಟಡ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಎಂ. ಕೃಷ್ಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.