Menu

ಟ್ರಂಪ್- ಪುಟಿನ್ ಭೇಟಿ: ಭಾರತದ ಮೇಲಿನ ಸುಂಕದ ಹೊರೆ ವಾಪಸ್?

trump-putin

ನವದೆಹಲಿ:ರಷ್ಯಾ ಜೊತೆಗಿನ ಮಾತುಕತೆಯ ಬಳಿಕ ಭಾರತದ ಉತ್ಪನ್ನಗಳ ಆಮದಿಗೆ ಹೆಚ್ಚುವರಿ ಸುಂಕ ವಿಧಿಸಿರುವ ನಿರ್ಧಾರವನ್ನು ಹಿಂಪಡೆಯುವ ಸುಳಿವುನ್ನು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ನಂತರ ಸಂದರ್ಶನವೊಂದರಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ ವಿಧಿಸಿರುವ ಸುಂಕದ ಬಗ್ಗೆ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಳೆದ ವಾರವಷ್ಟೇ ಟ್ರಂಪ್ ಭಾರತದ ಉತ್ಪನ್ನಗಳ ಮೇಲೆ ಶೇ 25 ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದರು. ಇದರೊಂದಿಗೆ, ಭಾರತದ ಉತ್ಪನ್ನಗಳ ಆಮದಿನ ಮೇಲೆ ಅಮೆರಿಕ ವಿಧಿಸಿದ್ದ ಸುಂಕದ ಪ್ರಮಾಣ ಶೇ 50 ತಲುಪಿತ್ತು. ಅಷ್ಟೇ ಅಲ್ಲದೆ, ಪುಟಿನ್ ಜತೆಗಿನ ಮಾತುಕತೆ ವಿಫಲವಾದರೆ ಭಾರತದ ಮೇಲೆ ಮತ್ತೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಟ್ರಂಪ್ ಹೇಳಿದ್ದರು.

ಏತನ್ಮಧ್ಯೆ, ‘ಒಮ್ಮತಕ್ಕೆ ಬಾರದೆ ಒಪ್ಪಂದ ಸಾಧ್ಯವಿಲ್ಲ’ ಎಂದು ವ್ಲಾಡಿಮಿರ್ ಪುಟಿನ್ ಜತೆಗಿನ ದ್ವಿಪಕ್ಷೀಯ ಮಾತುಕತೆಯ ಬಳಿಕ ಡೊನಾಲ್ಡ್ ಟ್ರಂಪ್ ಹೇಳಿದ್ದು, ಅಮೆರಿಕವು ಭಾರತದ ಮೇಲೆ ಮತ್ತಷ್ಟು ಸುಂಕ ವಿಧಿಸಲಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ಟ್ರಂಪ್, ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲಿನ ಸುಂಕದ ಬಗ್ಗೆ 2-3 ವಾರಗಳಲ್ಲಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ ಜತೆ ಮಾತುಕತೆ ನಡೆಸಿದ ನಂತರ ಫಾಕ್ಸ್ ನ್ಯೂಸ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ಉಕ್ರೇನ್​ ಯದ್ಧವು ಪ್ರಾದೇಶಿಕ ವಿನಾಯಿತಿಗಳೊಂದಿಗೆ ಕೊನೆಗೊಳ್ಳಲಿದೆ ಎಂದಿದ್ದಾರೆ. ಉಕ್ರೇನ್ ಹಾಗೂ ರಷ್ಯಾ ಮಧ್ಯೆ ಭೂ ವಿನಿಮಯ ಏರ್ಪಡಲಿದೆ. ಇದು ಸಹ ನಮ್ಮ ಮಾತುಕತೆಯ ಭಾಗವಾಗಿತ್ತು. ಅದೇ ರೀತಿ, ಉಕ್ರೇನ್​​ಗೆ ಅಮೆರಿಕವು ಸಂಭಾವ್ಯ ಭದ್ರತೆಯ ಖಾತರಿ ಒದಗಿಸುವ ಬಗ್ಗೆಯೂ ಚರ್ಚೆಯಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

ಆದಾಗ್ಯೂ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜತೆಗಿನ ಮಾತುಕತೆಯ ನಂತರವೇ ಇದು ಅಂತಿಮಗೊಳ್ಳಲಿದೆ. ಅವರು ಈ ಒಪ್ಪಂದಕ್ಕೆ ಒಪ್ಪದೆ ಇರಲೂಬಹುದು. ಆದರೆ, ಒಪ್ಪಂದಕ್ಕೆ ಉಕ್ರೇನ್ ಒಪ್ಪಿಕೊಳ್ಳಬೇಕು ಎಂದು ಟ್ರಂಪ್ ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published. Required fields are marked *