ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದು, ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಸಂಚರಿಸಲಾಗದ ಕಾರಣ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ.
ವರ್ತೂರಿನ 35 ವರ್ಷದ ಆನಂದ್ ಮೃತಪಟ್ಟ ಗಾಯಾಳು. ರಾತ್ರಿ 10.45ಕ್ಕೆ ಘಟನೆ ನಡೆದಿದೆ. ಬೈಕ್ ಸ್ಕಿಡ್ ಆಗಿ ರಸ್ತೆಯಲ್ಲಿ ಬಿದ್ದಿದ್ದ ಆನಂದ್ ಅವರನ್ನು ಆಸ್ಪತ್ರೆಗೆ ಸೇರಿಸಲು ಸಾರ್ವಜನಿಕರು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದರು ಗಾಯಾಳುವನ್ನು ಆ್ಯಂಬುಲೆನ್ಸ್ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಆ್ಯಂಬುಲೆನ್ಸ್ ಜಕ್ಕೂರು ಏರೋ ಡ್ರಮ್ ರಾಷ್ಟ್ರೀಯ ಹೆದ್ದಾರಿಯಿಂದ ನ್ಯಾಯಾಂಗ ಬಡಾವಣೆಗೆ ಸಂಪರ್ಕಿಸುವ ರೈಲ್ವೆ ಕೆಳಸೇತುವೆ ಮೂಲಕ ಸಂಚರಿಸಲಾಗದೆ ಪರದಾಟವಾಗಿದೆ.
ಬಳಿಕ ಗಾಯಾಳುವನ್ನು ಕಾರಿಗೆ ಶಿಫ್ಟ್ ಮಾಡಿ ಆಸ್ಪತ್ರೆಗೆ ಕರೆದೊಯ್ದರೂ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ಮೇಲೆ ಮಚ್ಚಿನಿಂದ ಹಲ್ಲೆ
ಮಂಜುನಾಥ್ ನಗರದಲ್ಲಿ ರಾತ್ರಿ ಜೊತೆಗೆ ಕರೆದೊಯ್ದುವರು ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ವಿಕ್ಕಿ ಹಲ್ಲೆಗೊಳಗಾದ ಯುವಕ. ಭರತ್, ಚಿನ್ನಿ ಪರಾರಿಯಾಗಿರುವ ಹಲ್ಲೆ ಆರೋಪಿಗಳು. ಸುಪಾರಿ ಪಡೆದು ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಹಲ್ಲೆ ಮಾಡಿ ಆ್ಯಕ್ಸಿಡೆಂಟ್ ಆಗಿದೆ ಎಂದು ಆರೋಪಿಗಳು ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದಾರೆ. ಹಲ್ಲೆಗೊಳಗಾದ ವಿಕ್ಕಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


