Menu

ಚಿಕ್ಕನಾಯಕನಹಳ್ಳಿಯಲ್ಲಿ ಕಂಬದಿಂದ ಬಿದ್ದು ಲೈನ್‌ಮ್ಯಾನ್‌ ಸಾವು

ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಮ್ಮನಹಳ್ಳಿ ವಿದ್ಯುತ್ ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಯಾದಗಿರಿ ಜಿಲ್ಲೆಯ ಸವದತ್ತಿ ಮೂಲದ ಮುತ್ತು (25) ವಿದ್ಯುತ್‌ ಕಂಬದಿಂದ ಬಿದ್ದು ಮೃತಪಟ್ಟಿದ್ದಾರೆ.

ಕತ್ರಿಕೆಹಾಳ್ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದಾಗ ಕ್ಲಾಂಪ್ ತುಂಡಾಗಿ ಆಯತಪ್ಪಿ ಸಿಮೆಂಟ್ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಚಿಕ್ಕನಾಯಕನಹಳ್ಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಮೃತದೇವನ್ನು ಇರಿಸಲಾಗಿದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *